ಶಿಮ್ಲಾ ಇನ್ನು “ಶ್ಯಾಮಲಾ’
Team Udayavani, Oct 22, 2018, 11:56 AM IST
ಶಿಮ್ಲಾ: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಹೆಸರು ಶೀಘ್ರವೇ “ಶ್ಯಾಮಲಾ’ ಎಂದು ಬದಲಾಗಲಿದೆ. ಈ ಬಗ್ಗೆ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರಕಾರ ಚಿಂತನೆ ನಡೆಸಿದೆ. ಶಿಮ್ಲಾ ಎನ್ನುವುದು ಬ್ರಿಟಿಷ್ ಕಾಲದ ಹೆಸರಾಗಿದೆ. ದಸರೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಈಗಿನ ಹೆಸರು ಬ್ರಿಟಿಷ್ ಆಡಳಿತದ ಪ್ರತೀಕವಾಗಿದೆ. ಸಾರ್ವಜನಿಕರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುತ್ತದೆ. ಬ್ರಿಟಿಷರ ಆಗಮನಕ್ಕೆ ಮೊದಲು ಶಿಮ್ಲಾವನ್ನು “ಶ್ಯಾಮಲಾ’ ಎಂದು ಕರೆಯಲಾಗುತ್ತಿತ್ತು ಎಂದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಸರಕಾರ ಅಲಹಾಬಾದ್ ಹೆಸರನ್ನು ಪ್ರಯಾಗ್ರಾಜ್ ಎಂದು ಬದಲಿಸುವ ಬಗ್ಗೆ ಸಂಪುಟ ನಿರ್ಧಾರ ಕೈಗೊಂಡಿತ್ತು. ಅದಕ್ಕೆ ರಾಜ್ಯಪಾಲ ರಾಮ್ ನಾಯ್ಕ ಕೂಡ ಅಂಗೀಕಾರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.