ಶಿವಸೇನೆ-ಬಿಜೆಪಿ ಮೈತ್ರಿ ಅಂತ್ಯ?
Team Udayavani, Sep 19, 2017, 7:00 AM IST
ಮುಂಬೈ: ಎನ್‌ಡಿಎ ಮಿತ್ರಪಕ್ಷವಾಗಿರುವ ಶಿವಸೇನೆ ಮತ್ತು ಬಿಜೆಪಿ ಸಂಬಂಧ ಮತ್ತೆ ಹಳಸಿದೆಯೇ? ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಶಿವಸೇನೆ ವಾಪಸ್ ಪಡೆಯಲಿದೆಯೇ?
ಅಗತ್ಯ ವಸ್ತುಗಳ ದರ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮತ್ತಿತರ ವಿಚಾರಗಳನ್ನೆತ್ತಿ ಬಿಜೆಪಿ ವಿರುದ್ಧ ಹರಿಹಾಯುವ ಮೂಲಕ ಶಿವಸೇನೆಯು ಇಂತಹುದೊಂದು ಪ್ರಶ್ನೆಯನ್ನು ಹುಟ್ಟು ಹಾಕಿದೆ. ಜತೆಗೆ, “ಬಿಜೆಪಿ ಜತೆಗಿನ ಮೈತ್ರಿ ಮುಂದುವರಿ ಸುವುದೋ ಅಥವಾ ಬೆಂಬಲ ವಾಪಸ್ ಪಡೆಯುವುದೋ ಎಂಬ ಕುರಿತು ಸದ್ಯದಲ್ಲೇ ನಿರ್ಧರಿಸಲಾಗುವುದು,’ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಅವರೇ ಹೇಳಿಕೆ ನೀಡಿದ್ದು, ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಬಿಕ್ಕಟ್ಟು ಆರಂಭವಾಗುವ ಮುನ್ಸೂಚನೆ ನೀಡಿದೆ.
ಸೋಮವಾರ ಶಿವಸೇನೆಯ ವಲಯದಲ್ಲಿ ಬಿರುಸಿನ ಚಟುವಟಿಕೆ ನಡೆದಿದ್ದು, ಪಕ್ಷದ ನಾಯಕರು ಮುಖ್ಯಸ್ಥ ಉದ್ಧವ್ ಠಾಕ್ರೆ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಬಳಿಕ “ಕಾದು ನೋಡಿ’ ಎಂಬ ಸಂದೇಶವನ್ನೂ ರವಾನಿಸಿದರು. ಮಾತೋಶ್ರೀಯಲ್ಲಿ ನಡೆದ ಚರ್ಚೆಯ ಬಳಿಕ ಟ್ವೀಟ್ ಮಾಡಿದ ಸಂಜಯ್ ರಾವುತ್, “ಬಿಜೆಪಿಯ ನೀತಿಗಳಲ್ಲಿನ ದೋಷಗಳನ್ನು ಹೊತ್ತುಕೊಳ್ಳಲು ನಮ್ಮ ಪಕ್ಷ ಸಿದ್ಧವಿಲ್ಲ. ಬಡವರನ್ನು ಅವಹೇಳನ ಮಾಡುವ ಮತ್ತು ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡುತ್ತಿರುವಂಥ ಪಕ್ಷದೊಂದಿಗೆ ಮುಂದುವರಿಯಲು ನಾವು ಬಯಸುವುದಿಲ್ಲ’ ಎಂದಿದ್ದಾರೆ.
ಇತ್ತೀಚೆಗೆ ಇಂಧನ ದರ ಏರಿಕೆ ಸಮರ್ಥಿಸಿಕೊಂಡಿದ್ದ ಕೇಂದ್ರ ಸಚಿವ ಆಲೊ#àನ್ಸ್ ಕಣ್ಣಂಥಾನನ್ ಅವರು, “ವಾಹನ ಹೊಂದಿರು ವವರೇನೂ ಹಸಿದ ಹೊಟ್ಟೆಯಲ್ಲಿ ಇರುವವರಲ್ಲ. ಅವರಿಗೆ ಪೆಟ್ರೋಲ್‌ಗೆ ಹಣ ಖರ್ಚು ಮಾಡುವಷ್ಟು ಸಾಮರ್ಥ್ಯ ವಿರುತ್ತದೆ’ ಎಂದಿದ್ದರು. ಈ ಹೇಳಿಕೆ ಬಗ್ಗೆ ಶಿವಸೇನೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯೋಗ್ಯತೆ ಇಲ್ಲದ ಸರ್ಕಾರ
ಈ ಕುರಿತು ತನ್ನ ಮುಖವಾಣಿ “ಸಾಮ್ನಾ’ದಲ್ಲಿ ಸಂಪಾದಕೀಯ ಬರೆದಿರುವ ಶಿವಸೇನೆ, “ಕೇಂದ್ರ ಸಂಪುಟದಲ್ಲಿರುವ ನವರತ್ನವು ಇದೀಗ ಪೆಟ್ರೋಲ್-ಡೀಸೆಲ್ ದರ ಏರಿಕೆಯನ್ನು ಸಮರ್ಥಿಸಿ ಕೊಳ್ಳುತ್ತಿದೆ. ಏಕೆಂದರೆ, ಅವರು ಎಂದಿಗೂ ಇಂಧನಕ್ಕೆ ತಮ್ಮ ಕಿಸೆಯಿಂದ ಹಣ ಖರ್ಚು ಮಾಡಿದ್ದೇ ಇಲ್ಲ. ಸಚಿವ ಆಲೊ#àನ್ಸ್ ಕಣ್ಣಂಥಾನನ್ ಅವರ ಹೇಳಿಕೆಯು ಬಡವರ ಮುಖಕ್ಕೆ ಉಗಿದಂತೆ. ಕಾಂಗ್ರೆಸ್ ಆಡಳಿತದಲ್ಲಿರುವಾಗಲೂ ಬಡವರಿಗೆ ಇಂತಹುದೊಂದು ಅವಮಾನ ಆದದ್ದಿಲ್ಲ,’ ಎಂದು ಹೇಳಿದೆ. ಜತೆಗೆ, “ಯೋಗ್ಯತೆ ಇಲ್ಲದವರು ಹಾಗೂ ಜನರೊಂದಿಗೆ ಸಂಪರ್ಕವೇ ಇಲ್ಲದವರು ಅಧಿಕಾರ ಹಿಡಿದರೆ ದೇಶದ ಗತಿ ಏನಾಗುತ್ತದೆ ಎನ್ನುವುದಕ್ಕೆ ಇಂದಿನ ಸ್ಥಿತಿಯೇ ಸಾಕ್ಷಿ’ ಎಂದು ಆರೋಪಿಸಿದೆ ಶಿವಸೇನೆ.
ಆತ್ಮಹತ್ಯೆಗೆ ಇಂಧನ ದರ ಏರಿಕೆ ಕಾರಣ
ದೇಶಾದ್ಯಂತ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಇಂಧನ ದರದಲ್ಲಾದ ಏರಿಕೆಯೂ ಕಾರಣ. ರೈತರು ನಿರಂತರ ಲೋಡ್ ಶೆಡ್ಡಿಂಗ್ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ, ಅವರು ಕೃಷಿಗೆ ಡೀಸೆಲ್ ಚಾಲಿತ ಜನರೇಟರ್ ಅವಲಂಬಿಸುವಂತಾಗಿದೆ. ಜತೆಗೆ, ತಮ್ಮ ಕೃಷಿ ಉತ್ಪನ್ನಗಳನ್ನು ದೂರದ ಮಾರುಕಟ್ಟೆಗೆ ಒಯ್ಯಲೂ ದುಬಾರಿ ಸಾಗಣೆ ವೆಚ್ಚ ಭರಿಸಬೇಕಾಗುತ್ತದೆ. ಈ ಹೊರೆ ತಾಳಲಾರದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಶಿವಸೇನೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.