![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 21, 2023, 4:02 PM IST
ಹೊಸದಿಲ್ಲಿ: ಕೆಲ ದಿನಗಳ ಹಿಂದಷ್ಟೇ ಪಕ್ಷದ ಚಿಹ್ನೆ ಮತ್ತು ಹೆಸರು ಕಳೆದುಕೊಂಡಿದ್ದ ಉದ್ಧವ್ ಠಾಕ್ರೆ ಬಣಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಮಂಗಳವಾರ ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಯನ್ನು ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಿದೆ.
ಶಿಂಧೆ ಬಣದ ಫ್ಲೋರ್ ಲೀಡರ್ ರಾಹುಲ್ ಶೆವಾಲೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಲೋಕಸಭೆಯ ಕಾರ್ಯದರ್ಶಿ, ಸಂಸತ್ ಭವನದಲ್ಲಿರುವ ಶಿವಸೇನೆ ಕಚೇರಿಗೆ ನಿಗದಿತ ಕೊಠಡಿಯನ್ನು ಪಕ್ಷಕ್ಕೆ ಹಂಚಿಕೆ ಮಾಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ವರದಕ್ಷಿಣೆಗೆ ಹಳೆಯ ಪೀಠೋಪಕರಣ ನೀಡಿದರೆಂದು ಮದುವೆಯನ್ನೇ ಮುರಿದ ವರ
ಕಳೆದ ಶುಕ್ರವಾರ ಚುನಾವಣಾ ಆಯೋಗವು ಶಿವಸೇನೆ ಪಕ್ಷ ಹೆಸರು ಮತ್ತು ಚಿಹ್ನೆಯನ್ನು ಏಕನಾಥ ಶಿಂಧೆ ನೇತೃತ್ವದ ಬಣಕ್ಕೆ ಹಂಚಿಕೆ ಮಾಡಿತ್ತು. ಇದರ ಬಗ್ಗೆ ಗರಂ ಆಗಿರುವ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನಾಳೆ, ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಶಿವಸೇನಾ ಸಾಹಸಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಮುಂದಿನ ವಿಚಾರಣೆಯನ್ನು ಆಲಿಸಲಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.