ಅಯೋಧ್ಯೆಗೆ ಶಿವನೇರಿ ಮಣ್ಣು
Team Udayavani, Nov 23, 2018, 6:00 AM IST
ಪುಣೆ: ಮರಾಠಾ ರಾಜ ಛತ್ರಪತಿ ಶಿವಾಜಿ ಜನ್ಮಸ್ಥಳ ಶಿವನೇರಿ ಕೋಟೆಗೆ ಗುರುವಾರ ಭೇಟಿ ನೀಡಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಅಲ್ಲಿನ ಮಣ್ಣನ್ನು ಸಂಗ್ರಹಿಸಿಕೊಂಡಿದ್ದು, ಇದೇ 25ರಂದು ಅಯೋಧ್ಯೆಗೆ ತೆರಳುವಾಗ ಅದನ್ನು ಕೊಂಡೊಯ್ಯುವುದಾಗಿ ಹೇಳಿದ್ದಾರೆ.
ಪುಣೆ ಜಿಲ್ಲೆಯ ಜುನ್ನಾರ್ ತೆಹ್ಸಿಲ್ನಲ್ಲಿ ಶಿವ ನೇರಿ ಕೋಟೆ ಇದೆ. ಇತ್ತೀಚೆಗೆ ಶಿವ ಸೇನೆಯ ವಿಜಯದಶಮಿ ರ್ಯಾಲಿಯಲ್ಲಿ ಮಾತನಾಡಿದ್ದ ಠಾಕ್ರೆ, 25ರಂದು ಅಯೋಧ್ಯೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದ್ದರು. ಅಲ್ಲದೇ, ರಾಮಮಂದಿರ ನಿರ್ಮಿಸುವ ಕುರಿತು ಪ್ರಧಾನಿ ಮೋದಿಗೆ ಪ್ರಶ್ನೆಯೆತ್ತುವು ದಾಗಿಯೂ ಹೇಳಿರುವ ಅವರು, “ಮೊದಲು ರಾಮಮಂದಿರ, ಬಳಿಕ ಸರಕಾರ’ ಎಂಬ ಉದ್ಘೋಷದ ಮೂಲಕ ಮಂದಿರ ನಿರ್ಮಾಣ ಚಳವಳಿ ತೀವ್ರಗೊಳಿಸುವುದಾಗಿ ನುಡಿದಿ ದ್ದರು. ಅದರಂತೆ, ಗುರುವಾರ ಶಿವನೇರಿಗೆ ತೆರಳಿ ಅಲ್ಲಿನ ಮಣ್ಣನ್ನು ಸಂಗ್ರಹಿಸಿ ಇಟ್ಟು ಕೊಂಡಿದ್ದಾರೆ. 25ರಂದು ಅಯೋಧ್ಯೆಯಲ್ಲಿ ಶಿವಸೇನೆಯ ಸಮ್ಮೇಳನ ನಡೆಯಲಿದೆ.
ಸಂಪುಟದಿಂದ ಕೈಬಿಡಿ: ಅಯೋಧ್ಯೆ ಪ್ರಕ ರಣಕ್ಕೆ ಸಂಬಂಧಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರಪ್ರದೇಶ ಸಚಿವ, ಎಸ್ಬಿಎಸ್ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಅವರನ್ನು ಸಂಪುಟದಿಂದಲೇ ಕೈ ಬಿಡು ವಂತೆ ವಿಶ್ವ ಹಿಂದೂ ಪರಿಷತ್ ಸಿಎಂ ಯೋಗಿ ಸರಕಾರಕ್ಕೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.