ಶಾಂತಿ ಸ್ಥಾಪನೆಗಾಗಿ ಮಧ್ಯಪ್ರದೇಶ ಸಿಎಂ ಚೌಹಾಣ್ ಉಪವಾಸ ಸತ್ಯಾಗ್ರಹ!
Team Udayavani, Jun 10, 2017, 9:54 AM IST
ಭೋಪಾಲ್:ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಮಧ್ಯಪ್ರದೇಶದ ಮಂದಸೌರ್ ನಲ್ಲಿ ಶಾಂತಿ ಸ್ಥಾಪನೆಗಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ತಾವು ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಕಳೆದ ವಾರ ಮಂದಸೌರ್ ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಏತನ್ಮಧ್ಯೆ ಮಂಗಳವಾರ ರೈತರು ರಸ್ತೆ ತಡೆ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಮೂಲಕ ಹಿಂಸಾಚಾರಕ್ಕೆ ಇಳಿದಿದ್ದರು.
ಗಲಾಟೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಗೆ ಐದು ರೈತರು ಬಲಿಯಾಗಿದ್ದರು. ಈ ಸಂದರ್ಭದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ರೈತನೊಬ್ಬ ಶುಕ್ರವಾರ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಇದರಿಂದ ಮಂದಸೌರ್ ನಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿತ್ತು.
ಇಂದು ಬೆಳಗ್ಗೆ 11ಗಂಟೆಯಿಂದ ದುಸ್ಸೆರಾ ಮೈದಾನದಲ್ಲಿ ತಾನು ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ರೈತರು ಖುದ್ದಾಗಿ ನನ್ನ ಬಳಿ ಬಂದು ವಿಷಯದ ಬಗ್ಗೆ ಚರ್ಚೆ ನಡೆಸಬಹುದು ಎಂದು ಮುಖ್ಯಮಂತ್ರಿ ಚೌಹಾಣ್ ತಿಳಿಸಿದ್ದಾರೆ. ಯಾರು ಘಟನೆಗೆ ಕಾರಣರೋ ಅವರಿಗೆ ಶಿಕ್ಷೆ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.