ಕೇಂದ್ರ ಬಜೆಟ್‌ಗೆ ಆಯೋಗ ಶಾಕ್?
Team Udayavani, Jan 5, 2017, 3:45 AM IST
ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಹಿಂದೂಡಬಹುದೇ ಎಂಬ ಕುರಿತು ಪರಿಶೀಲಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಸಾಮಾನ್ಯವಾಗಿ ಫೆಬ್ರವರಿ ಕೊನೆಯ ವಾರದಲ್ಲಿ ಬಜೆಟ್ ಮಂಡನೆಯಾಗುತ್ತದೆ. ಆದರೆ ಈ ಬಾರಿ ಫೆ.1ರಂದೇ ಆಯವ್ಯಯ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಆದರೆ ಇದರ ವಿರುದ್ಧ ಕಾಂಗ್ರೆಸ್, ಎಸ್ಪಿ, ಎಡರಂಗ ಸೇರಿದಂತೆ ಹಲವು ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಬಜೆಟ್‌ನಲ್ಲಿ ಸರ್ಕಾರ ಹಲವಾರು ಘೋಷಣೆಗಳನ್ನು ಪ್ರಕಟಿಸುವುದರಿಂದ ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ.
ಹೀಗಾಗಿ ಬಜೆಟ್ ಹಿಂದೂಡಲು ಅವಕಾಶ ನೀಡಬಾರದು ಎಂದು ಕೋರಿವೆ. ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ರಾಜಕೀಯ ಪಕ್ಷಗಳಿಂದ ಮನವಿ ಬಂದಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ನಡುವೆ, ಧಾರ್ಮಿಕ ನೆಲೆಯ ಆಧಾರದ ಮೇಲೆ ಮತ ಕೇಳಬಾರದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಆ ತೀರ್ಪನ್ನು ಪಂಚರಾಜ್ಯ ಚುನಾವಣೆ ವೇಳೆ ಜಾರಿಗೆ ತರಲು ಪ್ರತ್ಯೇಕ ಸೂಚನೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.