ಗ್ರಾಹಕರಿಗೆ ಇಂಧನ ದರ ಏರಿಕೆಯ ಶಾಕ್‌?

Team Udayavani, Sep 16, 2019, 5:55 AM IST

shock

ಹೊಸದಿಲ್ಲಿ/ದುಬಾೖ: ವಿಶ್ವದ ಅತೀ ಪ್ರಮುಖ ತೈಲ ಉತ್ಪಾದಕ ಕಂಪೆನಿ ಸೌದಿ ಅರೇಬಿಯಾದ ಅರಾಮ್‌ಕೋ ತೈಲ ಘಟಕಗಳ ಮೇಲೆ ಡ್ರೋನ್‌ ದಾಳಿ ನಡೆದಿರುವುದರಿಂದಾಗಿ ಭಾರತ ಸಹಿತ ಹಲವು ರಾಷ್ಟ್ರಗಳಿಗೆ ತೈಲ ಕೊರತೆ ಆತಂಕ ಕಾಡಿದೆ. ದಾಳಿಯ ಪರಿಣಾಮ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ ತಲುಪುವ ಆತಂಕ ಎದುರಾಗಿರುವುದರಿಂದ ದೇಶದಲ್ಲಿ ತೈಲ ದರ ಏರಿಕೆಯ ಗುಮ್ಮ ಕಾಡುತ್ತಿದೆ.

ಡ್ರೋನ್‌ ದಾಳಿಯಿಂದಾಗಿ ಎರಡು ತೈಲ ಘಟಕಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದ್ದು, ಸೌದಿ ಅರೇಬಿಯಾ ಒಟ್ಟು ಉತ್ಪಾದಿಸುತ್ತಿದ್ದ ತೈಲದಲ್ಲಿ ಅರ್ಧದಷ್ಟು ಕೊರತೆಯಾಗಿದೆ. ಬ್ರೆಂಟ್‌ ಕಚ್ಚಾ ತೈಲವು ಶುಕ್ರವಾರ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ 60.25 ಡಾಲರ್‌ ಆಗಿತ್ತು.

ಈ ಬಗ್ಗೆ ಮಾತನಾಡಿದ ಭಾರತದ ಅಧಿಕಾರಿಯೊಬ್ಬರು, ಇದೊಂದು ಗಂಭೀರ ಸನ್ನಿವೇಶ. ನಾವು ಇದರ ಮೇಲೆ ನಿಗಾ ವಹಿಸಿದ್ದೇವೆ ಎಂದಿದ್ದಾರೆ. ಕಚ್ಚಾ ತೈಲ ಹಾಗೂ ಅಡುಗೆ ಅನಿಲ ಪೂರೈಕೆಯಲ್ಲಿ ಭಾರತಕ್ಕೆ ಸೌದಿ ಅರೇಬಿಯಾ ಅತ್ಯಂತ ಪ್ರಮುಖ ದೇಶವಾಗಿದೆ. ತೈಲ ಬೆಲೆಯಲ್ಲಿ ಏರಿಕೆಯಾದರೆ ಭಾರತದ ಆಮದು ಮೇಲೆ ಪರಿಣಾಮ ಬೀರುತ್ತದೆ ಮತ್ತು ಇದರಿಂದ ವ್ಯಾಪಾರದಲ್ಲಿ ಅಸಮತೋಲನ ಉಂಟಾಗುತ್ತದೆ. ಬ್ಯಾರೆಲ್‌ ಮೇಲೆ ಒಂದು ಡಾಲರ್‌ ಏರಿಕೆಯಾದರೂ ಭಾರತವು ವಾರ್ಷಿಕ ವಾಗಿ 10,700 ಕೊಟಿ ರೂ. ಹೆಚ್ಚುವರಿ ವೆಚ್ಚ ಮಾಡಬೇಕಾಗುತ್ತದೆ. ಭಾರತ ಶೇ. 80ರಷ್ಟು ತೈಲ ವನ್ನು ಆಮದು ಮಾಡಿಕೊಳ್ಳುತ್ತಿದ್ದು, ಇದರಲ್ಲಿ ಸೌದಿ ಅರೇಬಿಯಾದ ಪಾಲು ಕೂಡ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಸೌದಿ ಅರೇಬಿಯಾದ ಅಬ್‌ಖೈಖ್‌ ಮತ್ತು ಖುರೈಸ್‌ ತೈಲ ಘಟಕಗಳ ಮೇಲೆ ಯೆಮೆನ್‌ ಬಂಡುಕೋರರು ಡ್ರೋನ್‌ ದಾಳಿ ನಡೆಸಿದ್ದು, ಇದರಿಂದಾಗಿ ಪ್ರತಿದಿನ 57 ಲಕ್ಷ ಬ್ಯಾರೆಲ್‌ ತೈಲ ಉತ್ಪಾದನೆ ಸ್ಥಗಿತಗೊಂಡಿದೆ.

ಇನ್ನು ಮಧ್ಯಪ್ರಾಚ್ಯವನ್ನೇ ಗಣನೆಗೆ ತೆಗೆದು ಕೊಂಡರೆ, ಸೋಮವಾರ ಪ್ರತಿ ಬ್ಯಾರೆಲ್‌ ಕಚ್ಚಾ ತೈಲಕ್ಕೆ 3ರಿಂದ 5 ಡಾಲರ್‌ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಯುದ್ಧಕ್ಕೆ ಸಿದ್ಧರಿದ್ದೇವೆ: ಇರಾನ್‌
ಸೌದಿ ಅರೇಬಿಯಾದ ಮೇಲಿನ ದಾಳಿಗೆ ಇರಾನ್‌ ಕಾರಣ ಎಂದು ಅಮೆರಿಕ ಆರೋಪಿಸಿದೆ. ಆದರೆ ಅದನ್ನು ಇರಾನ್‌ ತಳ್ಳಿ ಹಾಕಿದೆ. ಸರಕಾರಿ ವಾಹಿನಿ ಜತೆಗೆ ಮಾತನಾಡಿದ ಇರಾನ್‌ ವಿದೇಶಾಂಗ ಇಲಾಖೆ ವಕ್ತಾರ ಅಬ್ಟಾಸ್‌ ಮೌಸವಿ “ಸೌದಿ ಅರೇಬಿಯಾದ ಮೇಲಿನ ದಾಳಿಗೆ ನಾವು ಕಾರಣ ಎಂಬ ಅಮೆರಿಕ ಆರೋಪ ನಿರಾಧಾರ. ಅಗತ್ಯಬಿದ್ದರೆ ಪೂರ್ಣ ಪ್ರಮಾಣದ ಯುದ್ಧಕ್ಕೂ ಸಿದ್ಧರಿದ್ದೇವೆ’ ಎಂದಿದ್ದಾರೆ.

ಇದರಿಂದಾಗಿ ಇರಾನ್‌ ಮತ್ತು ಅಮೆರಿಕದ ಮಧ್ಯೆ ಈಗಾಗಲೇ ಹದಗೆಟ್ಟಿರುವ ಸಂಬಂಧ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಯೂ ಇದೆ. ಇದು ತೈಲ ಬೆಲೆಯ ಮೇಲೆಯೂ ಪರಿಣಾಮ ಬೀರಬಹುದು ಎನ್ನಲಾಗಿದೆ. ದಾಳಿಗೆ ಯೆಮೆನ್‌ನ ಹುತಿ ಬಂಡುಕೋರರು ಈಗಾಗಲೇ ಹೊಣೆ ಹೊತ್ತುಕೊಂಡಿದ್ದು, ಸೌದಿ ನೇತೃತ್ವದಲ್ಲಿ ಯೆಮೆನ್‌ ಬಂಡುಕೋರರ ಮೇಲೆ ಸೇನಾ ಪಡೆಗಳ ಒಕ್ಕೂಟ ನಡೆಸುತ್ತಿರುವ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದೆ.

ಟಾಪ್ ನ್ಯೂಸ್

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.