ಪ್ರವಾಹಕ್ಕೆ ವಿಲಿಯಂ-ಕೇಟ್ ದಂಪತಿ ಕಳವಳ ; ಕಾಜಿರಂಗ ಉದ್ಯಾನದ ನಿರ್ದೇಶಕರಿಗೆ ಪತ್ರ
Team Udayavani, Jul 25, 2020, 6:40 AM IST
ಪ್ರವಾಹ ಸಂತ್ರಸ್ಥರಿಗೆ ವಿತರಿಸಲು ಉದ್ದೇಶಿಸಲಾಗಿರುವ ಪರಿಹಾರ ಸಾಮಗ್ರಿಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ಕಳುಹಿಸಿಕೊಟ್ಟರು. ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಇದ್ದಾರೆ.
ಹೊಸದಿಲ್ಲಿ: ಪ್ರವಾಹದಿಂದಾಗಿ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಭಾರೀ ಸಂಖ್ಯೆಯ ಪ್ರಾಣಿಗಳು ಮೃತಪಟ್ಟಿರುವ ಬಗ್ಗೆ ಬ್ರಿಟನ್ ರಾಜಕುಮಾರ ಪ್ರಿನ್ಸ್ ವಿಲಿಯಂ ಮತ್ತು ಪತ್ನಿ ಕೇಟ್ ಮಿಡ್ಲ್ಟನ್ ಆಘಾತ ವ್ಯಕ್ತಪಡಿಸಿದ್ದಾರೆ.
ಉದ್ಯಾನದ ನಿರ್ದೇಶಕ ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, 2016ರಲ್ಲಿ ಕಾಜಿರಂಗ ಭೇಟಿ ಅವಿಸ್ಮರಣೀಯ.
ಅಲ್ಲಿ ಇಷ್ಟೊಂದು ಹಾನಿಯಾಗಿರುವುದು ಬೇಸರ ತರಿಸಿದೆ ಎಂದಿದ್ದಾರೆ. ಅಸ್ಸಾಂನಲ್ಲಿ ಈವರೆಗೆ ಮಳೆ, ಪ್ರವಾಹ ಸಂಬಂಧಿ ಘಟನೆಗಳಿಗೆ 96 ಮಂದಿ ಮೃತಪಟ್ಟಿದ್ದಾರೆ.
ಇದೇ ವೇಳೆ, ಅಸ್ಸಾಂ, ಬಿಹಾರ, ಉತ್ತರಪ್ರದೇಶದ ಪ್ರವಾಹ ಪೀಡಿತ ಪ್ರದೇಶಗಳಿಗೆ ರೆಡ್‌ಕ್ರಾಸ್ ಸಂಸ್ಥೆಯ ಪರಿಹಾರ ಸಾಮಗ್ರಿಗಳನ್ನು ಹೊತ್ತ 9 ಟ್ರಕ್‌ಗಳು ಶುಕ್ರವಾರ ದೆಹಲಿಯಿಂದ ತೆರಳಿದ್ದು, ಇದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಿದ್ದಾರೆ.
ಬಿಹಾರದ ಗಂಡಕ್ ನದಿ ಅಪಾಯದ ಮಟ್ಟ ಮೀರಿ ಹರಿದ ಕಾರಣ, 45 ಗ್ರಾಮಗಳಿಗೆ ನೀರು ನುಗ್ಗಿದೆ. ಕನಿಷ್ಠ 50 ಸಾವಿರ ಮಂದಿ ಅತಂತ್ರರಾಗಿದ್ದಾರೆ. ಎನ್‌ಡಿಆರ್‌ಎಫ್ ನ ಮೂರು ತಂಡ ಸ್ಥಳಕ್ಕೆ ಆಗಮಿಸಿ, ಜನರ ರಕ್ಷಣಾ ಕಾರ್ಯ ಆರಂಭಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.