ಕಾಶ್ಮೀರದಲ್ಲಿ ಐವರು ಬಂಗಾಳ ಕಾರ್ಮಿಕರ ಹತ್ಯೆ: ನಮಗೆ ಆಘಾತವಾಗಿದೆ; ಮಮತಾ ಬ್ಯಾನರ್ಜಿ
Team Udayavani, Oct 30, 2019, 8:58 AM IST
ಪಶ್ಚಿಮ ಬಂಗಾಳ: ಜಮ್ಮು ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮುರ್ಷಿದಾಬಾದ್ ನ ಐವರು ಕಾರ್ಮಿಕರ ಕುಟುಂಬಗಳಿಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲಾ ನೆರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕಾಶ್ಮೀರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ಮೆರೆದಿದ್ದು , ನಡೆದ ಕ್ರೂರ ಹತ್ಯೆಗಳ ಬಗ್ಗೆ ನಮಗೆ ಆಘಾತ ಮತ್ತು ದುಃಖವಾಗಿದೆ. ಮುರ್ಷಿದಾಬಾದ್ ನ ಐವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸತ್ತವರ ಕುಟುಂಬಗಳ ದುಃಖವನ್ನು ಪದಗಳಲ್ಲಿ ಹೇಳಲಾಗುವುದಿಲ್ಲ. ಈ ದುರಂತ ಪರಿಸ್ಥಿತಿಯಲ್ಲಿ ಕುಟುಂಬಗಳಿಗೆ ಬೇಕಾದ ಎಲ್ಲಾ ಸಹಾಯವನ್ನು ನೀಡಲಾಗುವುದು ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.
ಅನಂತನಾಗ್ ಜಿಲ್ಲೆಯಲ್ಲಿ ಟ್ರಕ್ ಚಾಲಕರೊಬ್ಬರನ್ನು ಉಗ್ರರು ಗುಂಡಿಕ್ಕಿ ಸಾಯಿಸಿದ್ದರು ಮತ್ತು ಆಗಸ್ಟ್ 05ರ ಬಳಿಕ ಇದುವರೆಗೆ ಉಗ್ರರು ಕಾಶ್ಮೀರದಲ್ಲಿ ಒಟ್ಟಾರೆ ನಾಲ್ಕು ಜನ ಟ್ರಕ್ ಚಾಲಕರನ್ನು ಕೊಂದಿದ್ದಾರೆ. ನಿನ್ನೆ ಸಂಜೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂವ್ ನಲ್ಲಿ ಐವರು ಕಾಶ್ಮೀರೇತರ ಕಟ್ಟಡ ಕಾರ್ಮಿಕರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದರು. ಅದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಪೈಕಿ ಐವರಲ್ಲಿ ಮೂವರನ್ನು ಶೇಖ್ ಕಮರುದ್ದೀನ್, ಶೇಕ್ ಮೊಹಮ್ಮದ್ ರಫೀಕ್, ಶೇಖ್ ಮುರ್ನುಸುಲಿನ್ ಎಂದು ಗುರುತಿಸಲಾಗಿದೆ. ಗಾಯಾಳು ಜಹರೂದ್ದೀನ್ ನನ್ನು ಅನಂತ್ ನಾಗ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಯೊರೋಪಿಯನ್ ಯೂನಿಯನ್ ನಿಯೋಗ ಜಮ್ಮು ಕಾಶ್ಮೀರದ ಪರಿಸ್ಥಿತಿ ಅವಲೋಕಿಸಲು ತೆರಳಿದ್ದ ವೇಳೆಯೇ ಉಗ್ರರು ಅಟ್ಟಹಾಸ ಮೆರೆದು ಐವರು ಕಾಶ್ಮೀರೇತರ ಕಟ್ಟಡ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು . ರಾಜ್ಯದಲ್ಲಿ ನಡೆದ ಪ್ರತ್ಯೇಕ ಉಗ್ರ ದಾಳಿಯಲ್ಲಿ ಈ ತಿಂಗಳು ಒಟ್ಟಾರೆ 11 ಮಂದಿ ಸಾವನ್ನಪ್ಪಿದ್ದಾರೆ.
We are shocked and deeply saddened at the brutal killings in Kashmir. Five workers from Murshidabad lost their lives. Words will not take away the grief of the families of the deceased. All help will be extended to the families in this tragic situation
— Mamata Banerjee (@MamataOfficial) October 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.