![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 6, 2022, 11:08 AM IST
ಬಿಹಾರ: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಥಳಿಸಿ ಹತ್ಯೆಗೈದಿರುವ ಘಟನೆ ಬಿಹಾರದ ಗಾಯತ್ರಿನಗರದ ಮೋತಿಹಾರಿಯಲ್ಲಿ ಮಂಗಳವಾರ ರಾತ್ರಿ ( ಜು.5 ರಂದು) ನಡೆದಿದೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಬಿನೋದ್, ಕುಡಿದು ಆಗಾಗ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ. ಕಳೆದ ರಾತ್ರಿ ಕುಡಿದ ಆಮಲಿನಲ್ಲಿ ಮನೆಗೆ ಬಂದು ಹೆಂಡತಿಗೆ ಹೊಡೆಯಲು ಆರಂಭಿಸಿದ್ದಾನೆ. ಜಗಳದ ನಡುವೆಯೇ ಹೆಂಡತಿ ಯಾಕೆ ಕುಡಿತ್ತೀಯ, ಕುಡಿಯುವುದನ್ನು ನಿಲ್ಲಿಸು ಎಂದು ಹೇಳಿ ಪ್ರತಿರೋಧ ಒಡ್ಡಿದ್ದಾಳೆ. ಈ ವೇಳೆ ಆಮಲಿನಲ್ಲಿದ್ದ ಬಿನೋದ್ ಹೆಂಡತಿಯ ಮಾತಿಗೆ ಸಿಟ್ಟಾಗಿ ಪಕ್ಕದಲ್ಲಿದ್ದ ತನ್ನ ಮೂರು ವರ್ಷದ ಮಗಳನ್ನು ಹೊಡೆಯಲು ಆರಂಭಿಸಿದ್ದಾನೆ.
ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು!
ನೆಲದ ಮೇಲಾಕಿ, ನೆಲಕ್ಕೆ ಬಡಿದು ಹಿಗ್ಗಾಮುಗ್ಗ ಥಳಿಸಿದ್ದಾನೆ. ಪರಿಣಾಮ ಮೂರು ವರ್ಷದ ಬೇಬಿ ಕುಮಾರಿ ನೋವಿನಲ್ಲಿ ಒದ್ಡಾಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಬಿನೋದ್ ನನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.