Tirumala Temple: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ
Team Udayavani, Jan 13, 2025, 4:15 PM IST
ಆಂಧ್ರಪ್ರದೇಶ: ಕೆಲ ದಿನಗಳ ಹಿಂದೆಯಷ್ಟೇ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯಲು ನೂರಾರು ಭಕ್ತರು ನೂಕುನುಗ್ಗಲು ನಡೆಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಆರು ಭಕ್ತರು ಮೃತಪಟ್ಟು ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇದರ ಬೆನ್ನಲ್ಲೇ ಇಂದು(ಜ.13) ತಿರುಪತಿಯ ಲಡ್ಡು ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.
ಇಲ್ಲಿನ ಲಡ್ಡು ಪ್ರಸಾದ ಕೌಂಟರ್ 47 ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಕೌಂಟರ್ ಬಳಿ ನಿಂತ್ತಿದ್ದ ಭಕ್ತರು ಗಾಬರಿಯಿಂದ ಒಡಲು ಆರಂಭಿಸಿದ್ದಾರೆ ಕೂಡಲೇ ಎಚ್ಚೆತ್ತ ಸಿಬ್ಬಂದಿಗಳು ಬೆಂಕಿಯನ್ನು ಆರಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಲಡ್ಡು ಪ್ರಸಾದ ಕೌಂಟರ್ ನಲ್ಲಿರುವ ಕಂಪ್ಯೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯಿಂದ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಕಾಲ್ತುಳಿದ ಘಟನೆ ಬೆನ್ನಲ್ಲೇ ನಡೆದ ಘಟನೆಯಿಂದಾಗಿ ಭಕ್ತರು ಕೆಲ ಹೊತ್ತು ಆತಂಕಕ್ಕೆ ಒಳಗಾಗಬೇಕಾಯಿತು.
Fire breaks out at #Tirumala laddu counter
The incident took place in the area where laddu prasadam is served, which is always crowded with devotees, causing panic among devotees and they ran away
The fire broke out at counter number 47
The incident occurred due to a short… pic.twitter.com/XUAcYK9Svt
— BNN Channel (@Bavazir_network) January 13, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rift Widen: ಮೈತ್ರಿಕೂಟ ಪಾಲನೆ ಎನ್‌ಡಿಎ ನೋಡಿ ಕಲಿಯಿರಿ: ಕಾಂಗ್ರೆಸ್‌ಗೆ ಉದ್ಧವ್ ಬಣ ಪಾಠ
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Chhattisgarh; 4 ವರ್ಷದ ಬಾಲಕಿ ಮೇಲೆ 10,13 ವರ್ಷದ ಹುಡುಗರಿಬ್ಬರಿಂದ ಲೈಂಗಿ*ಕ ದೌರ್ಜನ್ಯ
India ತಿರುಗೇಟು; ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.