Supreme Court: ಹದಿಹರೆಯದ ಸಮ್ಮತಿ ಲೈಂಗಿಕತೆ ಅಪರಾಧವಲ್ಲ ಎಂದು ಪರಿಗಣಿಸಬೇಕೇ?
Team Udayavani, Aug 20, 2023, 12:00 AM IST
ಹೊಸದಿಲ್ಲಿ: ಹದಿಹರೆಯದ ಸಮ್ಮತಿಯ ಲೈಂಗಿಕತೆಯನ್ನು ಅಪರಾಧವಲ್ಲದ ಪ್ರಕರಣ ಎಂದು ಪರಿಗಣಿಸಬೇಕೇ ಎಂಬ ಕುರಿತು ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. 18ಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಹಾಗೂ 18 ಮೇಲ್ಪಟ್ಟ ಯುವಕರು ಸಮ್ಮತಿ ಯ ಲೈಂಗಿಕತೆಯಲ್ಲಿ ತೊಡಗುವ ಪ್ರಕರಣಗಳು ಹೆಚ್ಚುತ್ತಿವೆ.
ಒಂದು ವೇಳೆ ಈ ಪ್ರಕರಣಗಳಲ್ಲಿ ಬಾಲಕಿ ಗರ್ಭಿಣಿಯಾದರೆ ಮತ್ತು ಅವರು ಪೋಷಕರು ಪ್ರಕರಣ ದಾಖಲಿಸಿದರೆ, ಯುವಕರು ಬಂಧನಕ್ಕೆ ಒಳಪಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿ ಸಲ್ಲಿಸಿರುವ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಈ ಸೂಚನೆ ನೀಡಿದೆ. ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳ ತಡೆ ಕಾಯ್ದೆ, 2012ರಡಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯ ಸಮ್ಮತಿಯೂ ಅಪ್ರಯೋಗಿಕವಾಗಿದೆ. ಈ ವಯಸ್ಸಿನವರೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗುವುದು ಅಪರಾಧವಾಗಿದೆ. ಐಪಿಸಿ ಸೆಕ್ಷನ್ 375ರ ಅಡಿ ಸಮ್ಮತಿ ಇದ್ದರೂ 16ರೊಳಗಿನ ಬಾಲಕಿಯೊಂದಿಗೆ ಲೈಂಗಿಕತೆಯಲ್ಲಿ ತೊಡಗುವುದನ್ನು ಅತ್ಯಾಚಾರ ಎಂದೇ ಪರಿಗಣಿಸಲಾಗುತ್ತದೆ. 16 ಮೇಲ್ಪಟ್ಟ ಬಾಲಕಿಯರು ಹಾಗೂ 16ರಿಂದ 20ರೊಳಗಿನ ಯುವಕರ ನಡುವಿನ ಸಮ್ಮತಿಯ ಲೈಂಗಿಕತೆಯನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು ಎಂದು ಕೋರಿ ನ್ಯಾಯವಾದಿ ಹರ್ಷ ವಿಭೋರ್ ಸಿಂಘಾಲ್ ಪಿಐಎಲ್ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.