Omar Abdullah ವಿರುದ್ಧ ರಾಜನಾಥ್ ಸಿಂಗ್ ಕಿಡಿ: ಅಫ್ಜಲ್ ಗುರುವನ್ನು ಸಮ್ಮಾನಿಸಬೇಕಿತ್ತೇ?

ಸಂಸತ್ ದಾಳಿಯ ಸಂಚುಕೋರನ ಮೇಲೆ ಅನುಕಂಪದ ಮಾತಾಡಿದ್ದ ಒಮರ್ ಅಬ್ದುಲ್ಲಾ!

Team Udayavani, Sep 8, 2024, 8:48 PM IST

1-raj

ರಾಮ್‌ಬನ್‌: 2001 ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ಕುರಿತು ನ್ಯಾಷನಲ್ ಕಾನ್ಫರೆನ್ಸ್ (NC) ನಾಯಕ ಒಮರ್ ಅಬ್ದುಲ್ಲಾ ಅನುಕಂಪ ಬೀರಿ ನೀಡಿದ ಹೇಳಿಕೆಗೆ ರಕ್ಷಣ ಸಚಿವ, ಬಿಜೆಪಿಯ(BJP) ಹಿರಿಯ ನಾಯಕ ರಾಜನಾಥ್ ಸಿಂಗ್ ರವಿವಾರ (ಸೆ.8)ಕಿಡಿ ಕಾರಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಮ್‌ಬನ್‌ನಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್ “ಒಮರ್ ಅಬ್ದುಲ್ಲಾ ಅವರು ಇಂತಹ ಹೇಳಿಕೆಗಳನ್ನು ನೀಡಿರುವುದು ದುರದೃಷ್ಟಕರವಾಗಿದೆ, ಅಫ್ಜಲ್ ಗುರುವನ್ನು ಗಲ್ಲಿಗೇರಿಸಬಾರದಾಗಿದ್ದರೆ, ನಾವು ಏನು ಮಾಡಬೇಕಿತ್ತು? ನಾವು ಅವರಿಗೆ ಸಾರ್ವಜನಿಕವಾಗಿ ಹಾರ ಹಾಕಿ ಸಮ್ಮಾನಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

”ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಜಮ್ಮು ಮತ್ತು ಕಾಶ್ಮೀರವನ್ನು ಎಟಿಎಂನಂತೆ ಬಳಸಿಕೊಂಡಿವೆ ಮತ್ತು ರಾಜ್ಯವನ್ನು ಲೂಟಿ ಮಾಡಿವೆ ” ಎಂದು ರಾಜನಾಥ್ ಸಿಂಗ್ ಕಿಡಿ ಕಾರಿದರು.

ಪಿಒಕೆ ನಿವಾಸಿಗಳು ಭಾರತಕ್ಕೆ ಬನ್ನಿ

ಪಾಕ್‌ ಆಕ್ರಮಿಕ ಕಾಶ್ಮೀರ (ಪಿಒಕೆ)ದ ನಿವಾಸಿಗಳೇ ಭಾರತಕ್ಕೆ ಬನ್ನಿ, ಇಲ್ಲೇ ನೆಲೆಸಿ. ಪಾಕಿಸ್ಥಾನವು ನಿಮ್ಮನ್ನು ವಿದೇಶಿಗರು ಎಂದರೂ ನಾವು ಮಾತ್ರ ನಿಮ್ಮನ್ನು ಭಾರತೀಯರೆಂದೇ ಪರಿಗಣಿಸಿದ್ದೇವೆ’ ಎಂದು ರಾಜನಾಥ್‌ ಸಿಂಗ್‌ ಹೇಳಿದರು.

ಉಗ್ರವಾದ ನಿಲ್ಲಿಸಿದರೆ ಪಾಕ್‌ ಜತೆ ಮಾತುಕತೆ
ಪಾಕ್‌ ಜತೆ ಮಾತುಕತೆ ನಡೆಸಬೇಕೆಂದು ಹಲವರು ಹೇಳುತ್ತಾರೆ. ಅದಕ್ಕೆ ಮೊದಲು ಪಾಕ್‌ ಉಗ್ರವಾದವನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು. ನೆರೆಯ ರಾಷ್ಟ್ರದೊಂದಿಗೆ ಒಳ್ಳೆಯ ಸಂಬಂಧವಿರಬೇಕೆಂದು ಯಾರಿಗೆ ಇಷ್ಟವಿಲ್ಲ ಹೇಳಿ? ಆದರೆ ಅದಕ್ಕೆ ಮುನ್ನ ಪಾಕ್‌ ಈ ಷರತ್ತನ್ನು ಪಾಲಿಸಬೇಕು. ಕಾಶ್ಮೀರದಲ್ಲಿ ಉಗ್ರ ಕೃತ್ಯಗಳಿಗೆ ಶೇ. 85ರಷ್ಟು ಮಂದಿ ಮುಸ್ಲಿಮರೇ ಬಲಿಯಾಗಿದ್ದಾರೆ. ನಾನು ಗೃಹ ಸಚಿವನಾಗಿ ಕಾರ್ಯನಿರ್ವಹಿಸಿದ್ದೇನೆ. ನನಗೆ ವಾಸ್ತವ ತಿಳಿದಿದೆ ಎಂದರು.

ಒಮರ್ ಅಬ್ದುಲ್ಲಾ ಅವರು ”ಅಫ್ಜಲ್ ಗುರುವನ್ನು ಗಲ್ಲಿಗೇರಿಸುವುದಕ್ಕೆ ಯಾವುದೇ ಉದ್ದೇಶವಿಲ್ಲ ಎಂದು ನಂಬಿದ್ದೇನೆ ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ಸರಕಾರವು ಆತನನ್ನು ಗಲ್ಲಿಗೇರಿಸುವುದನ್ನು ಅನುಮೋದಿಸುತ್ತಿರಲಿಲ್ಲ ಎಂದು ಹೇಳಿದ್ದರು.

2001,ಡಿಸೆಂಬರ್ 13 ರಂದು ಸಂಸತ್ ಭವನದ ಮೇಲಿನ ದಾಳಿಯ ಸಂಚು ರೂಪಿಸಿದ್ದಕ್ಕಾಗಿ 2013 ಫೆಬ್ರವರಿ 9 ರಂದು ದೆಹಲಿಯ ತಿಹಾರ್ ಜೈಲಿನಲ್ಲಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಲಾಗಿತ್ತು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.