ಶ್ರದ್ಧಾ ವಾಲ್ಕರ್ ಪ್ರಕರಣ: ನಾಳೆ ಆರೋಪಿ ಅಫ್ತಾಬ್ ಮಂಪರು ಪರೀಕ್ಷೆ
ಕೃತ್ಯಕ್ಕೆ ಬಳಸಿದ್ದ ಚಾಕು, ಶ್ರದ್ಧಾ, ಆರೋಪಿಯ ಬಟ್ಟೆಗಳು ಪೊಲೀಸರ ವಶಕ್ಕೆ
Team Udayavani, Nov 20, 2022, 7:10 AM IST
ನವದೆಹಲಿ: ಶ್ರದ್ಧಾ ವಾಲ್ಕರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲನನ್ನು ನವದೆಹಲಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಸೋಮವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ ನ್ಯಾಯಾಲಯವು ಮಂಗಳವಾರದವರೆಗೆ ಆರೋಪಿ ಅಫ್ತಾಬ್‌ನನ್ನು ಪೊಲೀಸರ ವಶಕ್ಕೆ ನೀಡಿದೆ. ಇದರ ಒಳಗೆ ಮಂಪರು ಪರೀಕ್ಷೆ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ಅಲ್ಲದೇ ಆತನ ವಿಚಾರಣೆಗಾಗಿ ಮತ್ತಷ್ಟು ದಿನಗಳು ತಮ್ಮ ವಶಕ್ಕೆ ನೀಡಬೇಕೆಂದು ಕೋರ್ಟ್ ಎದುರು ಪೊಲೀಸರು ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಚಾಕು ವಶಕ್ಕೆ:
ಇನ್ನೊಂದೆಡೆ, ಗುರುಗ್ರಾಮದಿಂದ ಮೂರು ಎಲುಬುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಶ್ರದ್ಧಾಳದ್ದು ಎನ್ನಲಾಗಿದೆ. ಜತೆಗೆ ಮೃತದೇಹವನ್ನು 35 ತುಂಡುಗಳನ್ನಾಗಿಸಲು ಆರೋಪಿ ಬಳಸಿದ್ದಾನೆ ಎನ್ನಲಾದ ಚಾಕು ಮತ್ತು ಇತರೆ ಹರಿತವಾದ ವಸ್ತುಗಳನ್ನು ಅಫ್ತಾಬ್ ಪ್ಲಾಟ್‌ನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಶ್ರದ್ಧಾ ಮತ್ತು ಅಫ್ತಾಬ್‌ನ ಬಟ್ಟೆಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹರಿತವಾದ ವಸ್ತು ಹಾಗೂ ಬಟ್ಟೆಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆ:
ಅ.18ರ ಬೆಳಗಿನ ಜಾವ ಅಫ್ತಾಬ್ ತನ್ನ ಮನೆಯ ಮಾರ್ಗದಲ್ಲಿ ಬ್ಯಾಗ್ ಸಮೇತ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ ಒಂದರಲ್ಲಿ ಸೆರೆಯಾಗಿದೆ. ಶ್ರದ್ಧಾ ಮೃತದೇಹದ ಭಾಗಗಳನ್ನು ಕಾಡಿಗೆ ಬಿಸಾಕಲು ಆತ ಬ್ಯಾಗ್ ಸಮೇತ ಹೋಗುತ್ತಿದ್ದಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮತ್ತೊಂದೆಡೆ, 2020ರಲ್ಲಿ ಶ್ರದ್ಧಾ ಮೇಲೆ ಆರೋಪಿ ಹಲ್ಲೆ ನಡೆಸಿದ್ದ ಸಂದರ್ಭದಲ್ಲಿ ಆಕೆಯ ನೆರವಿಗೆ ಬಂದಿದ್ದ ಇಬ್ಬರು ಸ್ನೇಹಿತರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಸ್ಕ್ವಾಡ್ ರಚನೆ:
ಶ್ರದ್ಧಾ ರೀತಿ ಮನೆಯಿಂದ ಓಡಿಬಂದು ಸಮಸ್ಯೆಗಳನ್ನು ಎದುರಿಸುತ್ತಿರುವ ಯುವತಿಯರ ನೆರವಿಗಾಗಿ ರಾಜ್ಯ ಮಹಿಳಾ ಆಯೋಗದಡಿಯಲ್ಲಿ ಸ್ಕ್ವಾಡ್ ರಚಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.