ಪಂಜಾಬ್‌ನಲ್ಲಿ ನಿಲ್ಲದ ಸಿಧು ತೊಳಲಾಟ ಈಗ ಎ.ಜಿ. ವಿಚಾರದಲ್ಲಿ ಮುನಿಸು
ಎ.ಪಿ.ಎಸ್. ದೇವಲ್ ವಜಾ ಮಾಡುವಂತೆ ಒತ್ತಾಯ; ಸಿಧು ಆಸೆಗೆ ತಣ್ಣೀರೆರಚಿದ ಸಿಎಂ ಛನ್ನಿ
Team Udayavani, Nov 6, 2021, 9:30 PM IST
ಚಂಡೀಗಡ: ಪಂಜಾಬ್ ಸಿಎಂ ಆಗಿದ್ದ ಕ್ಯಾ.ಅಮರಿಂದರ್ ಸಿಂಗ್ ವಿರುದ್ಧ ತಕರಾರು ತೆಗೆದಿದ್ದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಈಗ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಛನ್ನಿ ಆಡಳಿತದ ವಿರುದ್ಧವೂ ತಗಾದೆ ತೆಗೆಯುವುದನ್ನು ಮುಂದುವರಿಸಿದ್ದಾರೆ.
ಹೊಸ ಬೆಳವಣಿಗೆಯಲ್ಲಿ ಅಡ್ವೊಕೇಟ್ ಜನರಲ್ ಎ.ಪಿ.ಎಸ್.ದೇವಲ್ ಅವರನ್ನು ಹುದ್ದೆಯಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದು, ಅದರ ಬೆನ್ನಲ್ಲೇ ದೇವಲ್ ಅವರೂ ಸಿಧು ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.
ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸೆ.28ರಂದು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದ ಸಿಧು ಅವರು, 2015ರಲ್ಲಿ ನಡೆದಿದ್ದ ಧಾರ್ಮಿಕ ಅವಹೇಳನ ಪ್ರಕರಣದಲ್ಲಿ ದೇವಲ್ ಕಾರ್ಯವೈಖರಿ ಪ್ರಶ್ನಿಸಿದ್ದರು ಮತ್ತು ಅವರನ್ನು ಬದಲಾಯಿಸಬೇಕು ಎಂದು ಪ್ರತಿಪಾದಿಸಿದ್ದರು. ಎಜಿ ದೇವಲ್‌ರನ್ನು ಹುದ್ದೆಯಿಂದ ತೆಗೆದುಹಾಕುವವರೆಗೂ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರುವುದಿಲ್ಲ ಎಂದೂ ಶುಕ್ರವಾರ ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ ಸಿಧು ವಿರುದ್ಧ ಶನಿವಾರ ತಿರುಗಿ ಬಿದ್ದಿರುವ ಅಡ್ವೊಕೇಟ್ ಜನರಲ್ ದೇವಲ್, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕರ್ತವ್ಯ ನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿದ್ದಾರೆ. ರಾಜಕೀಯ ಲಾಭ ಪಡೆಯುವ ನಿಟ್ಟಿನಲ್ಲಿ ಸಿಧು ಅವರ ಕಚೇರಿ ತಪ್ಪು ಮಾಹಿತಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ. ಶೀಘ್ರದಲ್ಲಿಯೇ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ನಿಟ್ಟಿನಲ್ಲಿ ಇಂಥ ಕೃತ್ಯಗಳನ್ನು ಎಸಗಲಾಗುತ್ತಿದೆ ಎಂದು ಅಡ್ವೊಕೇಟ್ ಜನರಲ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಪ್ಪು ಸಾವಿಗೆ ಜಿಮ್ ಕಾರಣವಲ್ಲ: ನೆನಪಿರಲಿ ಪ್ರೇಮ್
ಸಿಎಂ ಸಮರ್ಥನೆ:
ಸಿಧು ಆರೋಪಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಛನ್ನಿ “ರಾಜ್ಯ ಸರ್ಕಾರದ ಕಾನೂನು ತಂಡ ಧಾರ್ಮಿಕ ಅವಹೇಳನ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್‌ನನನ್ನು ವಿಚಾರಣೆ ನಡೆಸಲು ಅನುಮತಿ ಪಡೆದುಕೊಂಡಿದೆ. ಇದಲ್ಲದೆ, ಮಾದಕ ವಸ್ತುಗಳ ಜಾಲದ ಪ್ರಕರಣದ ವಿರುದ್ಧವೂ ಹೋರಾಟ ನಡೆಸುತ್ತಿದೆ. ನ.18ರಂದು ಅದಕ್ಕೆ ಸಂಬಂಧಿಸಿದ ವರದಿಗಳು ಬಹಿರಂಗಗೊಳ್ಳಲಿವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.