ಭಾರತದಲ್ಲಿ ಭಯೋತ್ಪಾದನೆ: ಸಿಕ್ಖ್ ತರುಣರಿಗೆ ಪಾಕ್ ISI ತರಬೇತಿ
Team Udayavani, Mar 21, 2018, 4:13 PM IST
ಹೊಸದಿಲ್ಲಿ : ಪಾಕಿಸ್ಥಾನದಲ್ಲಿನ ಐಎಸ್‌ಐ ಶಿಬಿರಗಳಲ್ಲಿ ಸಿಕ್ಖ್ ಯುವಕರಿಗೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ತರಬೇತಿ ನೀಡಲಾಗುತ್ತಿದೆ. ಕೆನಡ ಮತ್ತಿತರ ಕಡೆಗಳಲ್ಲಿ ನೆಲೆಸಿರುವ ಸಿಕ್ಖರಿಗೆ ಭಾರತದ ವಿರುದ್ಧ ಸುಳ್ಳು ಮತ್ತು ನಂಜಿನ ಅಪಪ್ರಚಾರದ ಮೂಲಕ ಭಾರತದ ವಿರುದ್ಧ ಪ್ರಚೋದಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯವು ಸಂಸದೀಯ ಮಂಡಳಿಗೆ ಮಾಹಿತಿ ನೀಡಿದೆ.
ಸಿಕ್ಖ ಯುವಕರನ್ನು ಇಂಟರ್‌ನೆಟ್ ಮತ್ತು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮೂಲಕ ಬುದ್ಧಿಪಲ್ಲಟಿಸಲಾಗುತ್ತಿದೆ ಎಂದು ಹಿರಿಯ ಬಿಜೆಪಿ ನಾಯಕ ಮುರಳೀ ಮನೋಹರ ಜೋಷಿ ನೇತೃತ್ವದ ಅಂದಾಜು ಸಮಿತಿಗೆ ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಅಧಿಕಾರಿಗಳನ್ನು ಒಳಗೊಂಡ ತಂಡವು ಮಾಹಿತಿ ನೀಡಿದೆ.
ಸಿಕ್ಖ ಬಂಡಾಯ ರಂಗದಲ್ಲಿ ಈಚಿನ ದಿನಗಳಲ್ಲಿ ಬದಲಾವಣೆಗಳಾಗುತ್ತಿರುವುದು ಕಂಡು ಬಂದಿದೆ; ದೇಶಕ್ಕೆ ಇದೊಂದು ದೊಡ್ಡ ಸವಾಲಾಗುವ ಸಾಧ್ಯತೆ ಇದೆ ಎಂದು “ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಆಂತರಿಕ ಭದ್ರತಾ ಪಡೆಗಳ ಮುಂದಿರುವ ಸವಾಲುಗಳು, ಅವುಗಳ ವಿಶ್ಲೇಷಣೆ ಮತ್ತು ನಿರ್ವಹಣಾ ವ್ಯವಸ್ಥೆ’ ಕುರಿತ ಮಂಡಳಿಯ ವರದಿಯನ್ನು ಮೊನ್ನೆ ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾಯಿತು.
ಯುರೋಪ್, ಅಮೆರಿಕ ಮತ್ತು ಕೆನಡದಲ್ಲಿ ನೆಲೆಸಿರುವ ಸಿಕ್ಖ ತರುಣರಿಗೆ ತಪ್ಪು ಮಾರ್ಗದರ್ಶನ ನೀಡಿ ಅವರ ದಾರಿ ತಪ್ಪಿಸಲಾಗುತ್ತಿದೆ ಮತ್ತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವಂತೆ ಅವರನ್ನು ಪ್ರಚೋದಿಸಲಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.