ಸಿಕ್ಕಿಂನಲ್ಲಿ ಮೊದಲ ಪ್ರಕರಣ: ದೇಶದಲ್ಲಿ 1.30 ಲಕ್ಷ ದಾಟಿದ ಕೋವಿಡ್-19 ಸೋಂಕಿತರ ಸಂಖ್ಯೆ
Team Udayavani, May 24, 2020, 8:00 AM IST
ನವದೆಹಲಿ: ದೇಶದಲ್ಲಿ ಕೋವಿಡ್ 19 ಆರ್ಭಟ ಆರಂಭವಾದಗಿನಿಂದ ಸಿಕ್ಕಿಂ ರಾಜ್ಯದಲ್ಲಿ ಒಂದೂ ಪ್ರಕರಣಗಳು ಕಂಡುಬಂದಿರಲಿಲ್ಲ. ಇದೀಗ ದೆಹಲಿಯಿಂದ ಮರಳಿದ ಓರ್ವ ವ್ಯಕ್ತಿಗೆ ಸೋಂಕು ಧೃಡಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,654 ಹೊಸ ಪ್ರಕರಣಗಳು ಧೃಡಪಟ್ಟು ದಾಖಲೆ ಸೃಷ್ಟಿಯಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 1.30 ಲಕ್ಷ ಜನರು ವೈರಾಣು ಪೀಡಿತರಾಗಿದ್ದು, ಮೃತರ ಸಂಖ್ಯೆ 3,720ಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 137 ಜನರು ಮೃತಪಟ್ಟಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು 44,000 ಜನರು ವೈರಾಣುವಿನಿಂದ ಬಳಲುತ್ತಿದ್ದಾರೆ. ನಂತರದಲ್ಲಿ ತಮಿಳುನಾಡುವಿನಲ್ಲಿ 15,512 ಜನರು ಸೋಂಕುವಿಗೆ ತುತ್ತಾದರೆ, ಗುಜರಾತ್ ನಲ್ಲಿ 13,268, ಮತ್ತು ದೆಹಲಿಯಲ್ಲಿ 12,910 ವೈರಸ್ ನಿಂದ ಭಾಧಿತರಾಗಿದ್ದಾರೆ.
ಗಮನಾರ್ಹ ಸಂಗತಿಯೆಂದರೇ 1,15,364 ಜನರ ಗಂಟಲು ದ್ರವ ಮಾದರಿಗಳನ್ನು ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾಗಿದೆ. ಈಗಾಗಲೇ ಸೋಂಕಿನಿಂದ 54,385 ಜನರು ಗುಣಮುಖರಾಗಿದ್ದಾರೆ.
ಮತ್ತೋಂದೆಡೆ ಅಮೆರಿಕಾದಲ್ಲಿ ಮರಣ ಮೃದಂಗ ಮುಂದುವರೆದಿದ್ದು, ಒಂದೇ ದಿನ 1,127 ಜನರು ಮೃತಪಟ್ಟಿದ್ದಾರೆ. ಈ ದೇಶದಲ್ಲಿ ಮೃತರ ಪ್ರಮಾಣ 97 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ ಕೂಡ ಗಣನೀಯ ಏರಿಕೆ (16,21,658) ಕಂಡಿದೆ.
ಜಗತ್ತಿನಾದ್ಯಂತ ಕೋವಿಡ್ 19 ಮಹಾಮಾರಿಗೆ 3,43,823 ಜನರು ಬಲಿಯಾಗಿದ್ದು ಸೋಂಕಿತರ ಪ್ರಮಾಣ 54,02,198ಕ್ಕೆ ಏರಿಕೆಯಾಗಿದೆ. ವೈರಾಣುವಿಗೆ ತುತ್ತಾದವರಲ್ಲಿ ಸುಮಾರು 22,47,237 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.