ಇಂದು ಮತ ಚಲಾಯಿಸಿದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತಾ?
Team Udayavani, Apr 11, 2019, 1:35 PM IST
ಸಿಕ್ಕಿಂ: ಲೋಕಸಭಾ ಚುನಾವಣೆಯ ಮತದಾನ ಹಂತಕ್ಕೆ ಗುರುವಾರದಂದು ಚಾಲನೆ ಸಿಕ್ಕಿದ್ದು 18 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ 91 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಮತಯಂತ್ರ ಗೊಂದಲ, ನಕಲಿ ಮತದಾನದ ಆರೋಪಗಳನ್ನು ಹೊರತುಪಡಿಸಿದಂತೆ ಒಟ್ಟಾರೆಯಾಗಿ ಎಲ್ಲಾ ಕಡೆಗಳಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ. ಇವತ್ತು ಮತದಾನ ನಡೆಯುತ್ತಿರುವ ರಾಜ್ಯಗಳಲ್ಲಿ ಈಶಾನ್ಯ ಭಾಗದ ರಾಜ್ಯಗಳೂ ಸೇರಿದೆ.
ಸಿಕ್ಕಿಂ ರಾಜ್ಯದ ಅತೀ ಹಿರಿಯ ಮತದಾರರೆಂದು ಗುರುತಿಸಲ್ಪಟ್ಟಿರುವ 107 ವರ್ಷದ ಸುಮಿತ್ರಾ ರಾಯ್ ಅವರು ಇಂದು ಮತದಾನ ಕೇಂದ್ರಕ್ಕೆ ಆಗಮಿಸಿ ತನ್ನ ಮತವನ್ನು ಯಶಸ್ವಿಯಾಗಿ ಚಲಾಯಿಸಿದರು. ದಕ್ಷಿಣ ಸಿಕ್ಕಿಂನ ಪೊಕ್ಲೊಕ್ ಕಮ್ರಂಗ್ ಎಂಬಲ್ಲಿರುವ ಕಮ್ರಂಗ್ ಸೆಕೆಂಡರಿ ಶಾಲೆಯಲ್ಲಿರುವ ಮತಗಟ್ಟೆಗೆ ವ್ಹೀಲ್ ಚಯರ್ ಮೂಲಕ ಆಗಮಿಸಿದ ಈ ಹಿರಿಯಜ್ಜಿ ತಮ್ಮ ಹಕ್ಕನ್ನು ಚಲಾಯಿಸಿದರು.
ಮತದಾನದ ಬಳಿಕ ಸುಮಿತ್ರಜ್ಜಿ ಅವರು ಮಾಧ್ಯಮ ಪ್ರತಿನಿಧಿಗಳ ಎದುರು ತಮ್ಮ ಮತ ಗುರುತಿನ ಚೀಟಿಯನ್ನು ಹೆಮ್ಮೆಯಿಂದ ತೋರಿಸಿದ್ದು ವಿಶೇಷವಾಗಿತ್ತು. ಮತಗಟ್ಟೆಗೆ ಆಗಮಿಸುತ್ತಿದ್ದಂತೆ ಅಧಿಕಾರಿಗಳು ಸುಮಿತ್ರಾ ರಾಯ್ ಅವರಿಗೆ ಶಾಲು ಹಾಕಿ ಸಾಂಪ್ರದಾಯಿಕ ಸ್ವಾಗತವನ್ನು ಕೋರಿದರು.
Sumitra Rai, 107, the oldest voter of Sikkim has just cast her vote @ Kamrang secondary school polling station at Poklok Kamrang, South Sikkim.#LokSabhaElections2019 #SikkimElections2019 #FestivalOfDemocracy@PIB_India@SpokespersonECI @DGNorthEast https://t.co/8lKi1gdOQp pic.twitter.com/EWr9GpsqSd
— PIB in Sikkim (@PIBGangtok) April 11, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.