CPI ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
Team Udayavani, Sep 10, 2024, 1:30 PM IST
ನವದೆಹಲಿ: ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಐ(ಎಂ)) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಇಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ಈಗ ಐಸಿಯುಗೆ ದಾಖಲಿಸಲಾಗಿದೆ. ಸದ್ಯ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಪಕ್ಷದ ಮುಖಂಡರು ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ, ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಸೀತಾರಾಮ್ ಯೆಚೂರಿ ಅವರನ್ನು ಆಗಸ್ಟ್ 19 ರಂದು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ದೆಹಲಿ ಏಮ್ಸ್‌ನ ಹಿರಿಯ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ. ಯೆಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
Comrade Sitaram Yechury’s health condition pic.twitter.com/NDPl8HE8K0
— CPI (M) (@cpimspeak) September 10, 2024
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.