8 ಆಸನದ ವಾಹನಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ! ಶೀಘ್ರದಲ್ಲೇ ನಿಯಮ ಜಾರಿ: ಸಚಿವ ಗಡ್ಕರಿ ಘೋಷಣೆ

Team Udayavani, Jun 29, 2022, 7:15 AM IST

8 ಆಸನದ ವಾಹನಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯ! ಶೀಘ್ರದಲ್ಲೇ ನಿಯಮ ಜಾರಿ: ಸಚಿವ ಗಡ್ಕರಿ ಘೋಷಣೆ

ನವದೆಹಲಿ: ಇನ್ನು ಮುಂದೆ ಗರಿಷ್ಠ 8 ಪ್ರಯಾಣಿಕರನ್ನು ಹೊತ್ತೂಯ್ಯಬಲ್ಲಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳು ಇರಬೇಕಾದ್ದು ಕಡ್ಡಾಯವಾಗಲಿದೆ.

ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರೇ ಸ್ವತಃ ಈ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರವು ಆದಷ್ಟು ಬೇಗ ಇಂಥದ್ದೊಂದು ನಿಯಮ ಜಾರಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಇಂಟೆಲ್‌ ಇಂಡಿಯಾದ ಸುರಕ್ಷತಾ ಪ್ರವರ್ತಕರ ಸಮ್ಮೇಳನ 2022ರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಗಡ್ಕರಿ, “ದೇಶಾದ್ಯಂತ ಸುಮಾರು 5 ಲಕ್ಷ ಅಪಘಾತಗಳಿಂದ 1.5 ಲಕ್ಷದಷ್ಟು ಮಂದಿ ಸಾವನ್ನಪ್ಪುತ್ತಾರೆ. ಹೀಗಾಗಿ ನಾವು ಜನರ ಪ್ರಾಣವನ್ನು ಉಳಿಸಬೇಕಿದೆ. ಅದಕ್ಕಾಗಿ ಮೋಟಾರು ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಿದ್ದೇವೆ’ ಎಂದು ತಿಳಿಸಿದ್ದಾರೆ.

ಅತ್ಯಧಿಕ ತೆರಿಗೆ, ಕಠಿಣ ಸುರಕ್ಷತಾ ಹಾಗೂ ಇಂಗಾಲ ಹೊರಸೂಸುವಿಕೆ ನಿಯಮಗಳಿಂದಾಗಿ ವಾಹನಗಳ ತಯಾರಿಕಾ ವೆಚ್ಚ ಹೆಚ್ಚಳವಾಗುತ್ತಿದೆ ಎಂದು ಆಟೋಮೊಬೈಲ್‌ ಉದ್ಯಮಗಳು ಕಳವಳ ವ್ಯಕ್ತಪಡಿಸಿರುವಂತೆಯೇ ಗಡ್ಕರಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ವೆಚ್ಚ ಹೆಚ್ಚಾದರೆ ಕಾರು ತಯಾರಿಗೆ ಸ್ಥಗಿತ
ಕೇಂದ್ರ ಸರ್ಕಾರದ ಕೆಲವೊಂದು ನಿಯಮಗಳಿಂದಾಗಿ ವಾಹನ ತಯಾರಿಕಾ ವೆಚ್ಚವು ಗಣನೀಯವಾಗಿ ಹೆಚ್ಚಳವಾಗಿದ್ದು, ಅವುಗಳು ಜನಸಾಮಾನ್ಯನ ಕೈಗೆಟುಕದಂಥ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಣ್ಣ ಕಾರುಗಳ ತಯಾರಿಕೆ ಸ್ಥಗಿತಗೊಳಿಸಲು ನಾವು ಹಿಂದೆಮುಂದೆ ನೋಡುವುದಿಲ್ಲ ಎಂದು ಮಾರುತಿ ಸುಜುಕಿ ಮುಖ್ಯಸ್ಥ ಆರ್‌.ಸಿ. ಭಾರ್ಗವ ಹೇಳಿದ್ದಾರೆ. 6 ಏರ್‌ಬ್ಯಾಗ್‌ ಕಡ್ಡಾಯಗೊಳಿಸಿದರೆ ಕಾರುಗಳ ದರ ಏರಿಕೆಯಾಗುತ್ತದೆ. ಇದರಿಂದ ಅಪಘಾತ ತಗ್ಗುತ್ತದೆ ಎನ್ನುವುದನ್ನು ಒಪ್ಪಲಾಗದು. ಅಲ್ಲದೇ, ಕಾಂಪ್ಯಾಕ್ಟ್ ಕಾರುಗಳ ಮಾರಾಟದಿಂದ ಕಂಪನಿಗಳಿಗೆ ಹೆಚ್ಚಿನ ಲಾಭವೂ ಆಗುವುದಿಲ್ಲ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.