ಕೇಂದ್ರದ ನೀತಿ ವಿರೋಧಿಸಿ ವಿವಿಧ ಸಂಘಟನೆಗಳಿಂದ ಜನವರಿ 8ಕ್ಕೆ ಬ್ಯಾಂಕ್ ಮುಷ್ಕರಕ್ಕೆ ಕರೆ
AIBEA, AIBOA, BEFI, INBEF, INBOC ಮತ್ತು BKSM ಸೇರಿ ಇತರೆ ಸಂಘಟನೆಗಳಿಂದ ಬಂದ್ ಆಚರಣೆ
Team Udayavani, Jan 4, 2020, 9:25 PM IST
ಹೊಸದಿಲ್ಲಿ: ಕೇಂದ್ರ ಸರಕಾರ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಜ.8ರಂದು ಅಖೀಲ ಭಾರತ ಬ್ಯಾಂಕ್ ನೌಕರರ ಸಂಘ (AIBEA), ಅಖೀಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (AIBOA), ಬ್ಯಾಂಕ್ ನೌಕರರ ಒಕ್ಕೂಟ (BEFI) ಸೇರಿ ಇತರೆ ಸಂಘಟನೆಗಳು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.
ಪ್ರಮುಖ ಬ್ಯಾಂಕ್ ನೌಕರರ ಸಂಘಟನೆಗಳು ಕೇಂದ್ರ ಸರಕಾರ ಕಾರ್ಮಿಕ ನೀತಿಗಳನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.ಜನವರಿ 8ರಂದು ಪ್ರತಿಭಟನೆ ನಡೆಸಲಿದ್ದು, ಬ್ಯಾಂಕ್ ಶಾಖೆಗಳು ಮತ್ತು ಎಟಿಎಂಗಳ ಸೇವಾ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮುಷ್ಕರ ದಿನದಂದು ತನ್ನ ಶಾಖೆಗಳನ್ನು ಸುಗಮವಾಗಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ಸಿಂಡಿಕೇಟ್ ಬ್ಯಾಂಕ್ ನೀಡಿದೆ.
2020ರ ಜನವರಿ 8ರಂದು ಮುಷ್ಕರಕ್ಕೆ ಸಂಬಂಧಿಸಿದ ನೋಟಿಸನ್ನು ಬ್ಯಾಂಕ್ ಸ್ವೀಕರಿಸಿದೆ. ಮುಷ್ಕರ ದಿನದಂದು ಬ್ಯಾಂಕ್‌ನ ಶಾಖೆಗಳು/ಕಚೇರಿಗಳು ಸುಗಮವಾಗಿ ಕಾರ್ಯನಿರ್ವಹಿಸಲು ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದೆ.
ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಮುಷ್ಕರವು ಸೇವಾ ಕಾರ್ಯಾಚರಣೆಗಳ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ.
ಮುಷ್ಕರದಲ್ಲಿ ಭಾಗವಹಿಸುವ ಯೂನಿಯನ್‌ಗಳಲ್ಲಿ ಬ್ಯಾಂಕ್ ನೌಕರರ ಸದಸ್ಯತ್ವ ಬಹಳ ಕಡಿಮೆ. ಆದ್ದರಿಂದ ಬ್ಯಾಂಕ್‌ನ ಕಾರ್ಯಾಚರಣೆಯ ಮೇಲೆ ಅಷ್ಟೇನು ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.