ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇ ಅಪಘಾತ: 6 ಸಾವು, 18 ಮಂದಿಗೆ ಗಾಯ
Team Udayavani, Feb 21, 2019, 10:02 AM IST
ಉನ್ನಾವೋ, ಉತ್ತರ ಪ್ರದೇಶ : ಲಕ್ನೋ – ಆಗ್ರಾ ಎಕ್ಸ್‌ಪ್ರೆಸ್ ವೇ ಯಲ್ಲಿನ ಮಿರ್ಜಾಪುರ ಅಜಿಗಾವನ್ ಗ್ರಾಮದಲ್ಲಿಂದು ಮೂರು ವಾಹನಗಳು ಒಳಗೊಂಡ ಭೀಕರ ಅಪಘಾತದಲ್ಲಿ ಆರು ಮಂದಿ ಮಡಿದು ಇತರ 18 ಮಂದಿ ಗಾಯಗೊಂಡ ಘಟನೆ ನಡೆದಿದೆ.
ನಸುಕಿನ 2 ಗಂಟೆಯ ವೇಳೆಗೆ ಪೈಪುಗಳನ್ನು ಸಾಗಿಸುತ್ತಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ರಸ್ತೆ ತುಂಬ ಪೈಪುಗಳು ಹರಿಡಿಕೊಂಡವು. ಇದೇ ವೇಳೆ ಈ ಮಾರ್ಗವಾಗಿ ಬಂದ ಬಸ್ಸೊಂದು ಪೈಪುಗಳ ಮೇಲೆ ಸಾಗಿ ಮಗುಚಿಕೊಂಡಾಗ ಅದು ತನ್ನ ಮುಂದಿದ್ದ ಕಾರಿಗೆ ಢಿಕ್ಕಿ ಹೊಡೆಯಿತು.
ಸ್ಥಳದಲ್ಲೇ ಮೃತಪಟ್ಟಿರುವ ಆರು ಮಂದಿಯಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ; 18 ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸರ್ಕಲ್ ಆಫೀಸರ್ ಅಂಬರೀಷ್ ಭಡೋರಿಯಾ ತಿಳಿಸಿದ್ದಾರೆ.
ಬಸ್ಸು ದಿಲ್ಲಿಯಿಂದ ಬರುತ್ತಿದ್ದು ಬಿಹಾರದ ಮುಜಫರಪುರಕ್ಕೆ ಹೋಗುತ್ತಿತ್ತು ಎಂದವರು ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕೆಲಸ ಈಗ ನಡೆಯುತ್ತಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.