11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; 10ರಿಂದ 15 ವರ್ಷದ ಬಾಲಕರ ಬಂಧನ
Team Udayavani, Apr 24, 2022, 9:54 AM IST
ರಾಂಚಿ: ಮಂಗಳವಾರ ರಾತ್ರಿ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ 10 ರಿಂದ 15 ವರ್ಷ ವಯಸ್ಸಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಹುಡುಗಿ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲು ಪಕ್ಕದ ಹಳ್ಳಿಗೆ ಹೋಗಿದ್ದಳು. ಒಂದು ನೃತ್ಯ ಕಾರ್ಯಕ್ರಮದ ಸಂದರ್ಭದಲ್ಲಿ, ಹುಡುಗಿ ತನ್ನ ಪರಿಚಯದ ಹುಡುಗರೊಂದಿಗೆ ಜಗಳವಾಡಿದ್ದಳು.
ಮಧ್ಯರಾತ್ರಿಯ ಸುಮಾರಿಗೆ ಆಕೆ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಮನೆಗೆ ಹಿಂದಿರುಗುತ್ತಿದ್ದಾಗ, ಅವರ ಹಿಂದೆ ನಡೆದುಕೊಂಡು ಬಂದ ಹುಡುಗರು ಆಕೆಯನ್ನು ತಡೆದು ಏಕಾಂಗಿ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡ ಆಕೆಯ ಇಬ್ಬರು ಸ್ನೇಹಿತರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ಸಮಯದ ನಂತರ, ಪೋಷಕರು ಅವಳನ್ನು ಹುಡುಕಲು ಬಂದಿದ್ದಾರೆ. ಹುಡುಗಿಯ ಪೋಷಕರನ್ನು ಕಂಡ ಆರೋಪಿ ಹುಡುಗರು ಓಡಿಹೋದರು ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ನರೇಂದ್ರ ಮೋದಿ ರ್ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ; ಕಟ್ಟೆಚ್ಚರ
ಹುಡುಗಿಯ ಕುಟುಂಬವು ಸಾಮಾಜಿಕ ಕಳಂಕದ ಕಾರಣದಿಂದಾಗಿ ಆರಂಭದಲ್ಲಿ ಪೊಲೀಸ್ ದೂರು ದಾಖಲಿಸಲು ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.
ಕೊನೆಗೆ ಗುರುವಾರ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರು ಆರೋಪಿಗಳನ್ನು ಬಂಧಿಸಿ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.