ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಹಿಮಪಾತ… ಓರ್ವ ವಿದೇಶಿಗ ಮೃತ್ಯು, ಇನ್ನೋರ್ವ ನಾಪತ್ತೆ
Team Udayavani, Feb 22, 2024, 3:37 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಓರ್ವ ಮೃತಪಟ್ಟು ಕೆಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮಾಹಿತಿಯ ಪ್ರಕಾರ, ಹಿಮಪಾತ ಸಂಭವಿಸಿದ ವೇಳೆ ವಿದೇಶಿಗರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಕೀಯಿಂಗ್ ಮಾಡುತ್ತಿದ್ದರು ಎನ್ನಲಾಗಿದೆ ಈ ವೇಳೆ ಹಠಾತ್ ಹಿಮಪಾತ ಸಂಭವಿಸಿದೆ ಪರಿಣಾಮ ಅಲ್ಲಿದ್ದ ಕೆಲವರು ಓಡಿ ಪ್ರಾಣ ಉಳಿಸಿಕೊಂಡರೆ ಮೂವರು ವಿದೇಶಿಗರು ಹಿಮಪಾತದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡ ಓರ್ವ ವಿದೇಶಿಗನನ್ನು ರಕ್ಷಣೆ ಮಾಡಿದ್ದು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ವಿದೇಶಿಗ ಮೃತಪಟ್ಟಿರುವುದಾಗಿ ವರದಿಯಾಗಿದ್ದು ನಾಪತ್ತೆಯಾದ ಓರ್ವನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಲ್ಮಾರ್ಗ್‌ನ ಬ್ಯಾಕ್ ಕಂಟ್ರಿ ಪ್ರದೇಶದಲ್ಲಿ ಈ ಹಿಮಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,
ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಾಲ್ಕನೇ ದಿನವೂ ಬಂದ್ ಆಗಿದ್ದು, ರಾಂಬನ್ – ಬನಿಹಾಲ್ ಸೆಕ್ಟರ್‌ನ ಹಲವೆಡೆ ಗುಡ್ಡದಳ್ಳಿ ಕಂಡು ಬಂದ ಬಿರುಕಿನಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಲ್ಲಿನ ಆಡಳಿತದಿಂದ ಸಂಚಾರ ಪುನಶ್ಚೇತನ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: Jaahnavi Kandula: ಭಾರತೀಯ ವಿದ್ಯಾರ್ಥಿನಿಯನ್ನು ಕೊಂದ ಪೊಲೀಸ್ ಅಧಿಕಾರಿ ಶಿಕ್ಷೆಯಿಂದ ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.