ಇಟಲಿಯಿಂದ ಮರಳಿದ ರಾಹುಲ್ ಇನ್ನೊಂದು ವಿದೇಶ ಪ್ರವಾಸ
Team Udayavani, Mar 6, 2018, 12:13 PM IST
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷ ದಯನೀಯವಾಗಿ ಸೋಲುಂಡ ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದಾಗ ಸದ್ದಿಲ್ಲದೆ ಇಟಲಿಗೆ ಹಾರಿ ಹೋಗಿದ್ದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ತರಾಟೆಗೆ ಗುರಿಯಾಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಟೀಕಾಕಾರರ ಯಾವುದೇ ಮಾತುಗಳಿಗೆ ಬೆದರದೆ ಇದೀಗ ಪುನಃ ಇದೇ ಮಾರ್ಚ್ 8 ರಂದು ಮೂರು ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ ಮಾರ್ಚ್ 8-9ರಂದ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ ಬಳಿಕ ಮಾರ್ಚ್ 10ರಂದು ಮಲೇಶ್ಯಕ್ಕೆ ಹೋಗಲಿದ್ದಾರೆ. ಸಿಂಗಾಪುರದಲ್ಲಿ ಎರಡು ದಿನಗಳ ಕಾಲ ಇರುವಾಗ ರಾಹುಲ್ ಅಲ್ಲಿನ ಭಾರತೀಯ ಸಮೂಹವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜತಗೆ ಅಲ್ಲಿನ ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮುಚ್ಚಿದ ಬಾಗಿಲ ಸಭೆ ನಡೆಸಲಿದ್ದಾರೆ.
ಮಲೇಶ್ಯ ಭೇಟಿಯ ವೇಳೆ ರಾಹುಲ್ ಅಲ್ಲಿನ ಭಾರತೀಯ ಮೂಲದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಲೇಶ್ಯದಲ್ಲಿ ಭಾರೀ ದೊಡ್ಡ ಸಂಖ್ಯೆಯಲ್ಲಿ ಭಾರತೀಯರಿದ್ದಾರೆ. ರಾಹುಲ್ ಗಾಂಧಿ ಅವರು ಇದೇ ಸಂದರ್ಭದಲ್ಲಿ ಮಲೇಶ್ಯದಲ್ಲಿನ ಭಾರತೀಯ ಉದ್ಯಮಿಗಳನ್ನು ಮತ್ತು ಕೆಲಸಗಾರರನ್ನು ಭೇಟಿಯಾಗಲಿದ್ದಾರೆ.
ರಾಹುಲ್ ಅವರ ಈ ವಿದೇಶ ಭೇಟಿಯ ವೇಳಾ ಪಟ್ಟಿ ಮತ್ತು ಕಾರ್ಯಕ್ರಮ ಸ್ವರೂಪ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಮೂನೆಯನ್ನೇ ಬಹುವಾಗಿ ಹೋಲುತ್ತದೆ. ಎಂದರೆ ರಾಹುಲ್, ಪ್ರಧಾನಿ ಮೋದಿ ಅವರನ್ನು ಈ ವಿಷಯದಲ್ಲೂ ಅನುಸರಿಸುತ್ತಿರುವಂತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.