ಜೆಡಿಯು ಕಾರ್ಯಕ್ರಮ: ಸಿಎಂ ನಿತೀಶ್ ಮೇಲೆ ಚಪ್ಪಲಿ ಎಸೆತ; ಓರ್ವ ಸೆರೆ
Team Udayavani, Oct 11, 2018, 5:32 PM IST
ಪಟ್ನಾ : ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ರಾಷ್ಟ್ರಾಧ್ಯಕ್ಷ, ನಿತೀಶ್ ಕುಮಾರ್ ಮತ್ತು ಪಕ್ಷದ ಹಿರಿಯ ಉನ್ನತ ನಾಯಕರು ಇಂದಿಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಆಸೀನರಾಗಿದ್ದ ವೇಳೆ ಯುವಕನೊಬ್ಬ ವೇದಿಕೆಯನ್ನು ಗುರಿ ಇರಿಸಿ ಚಪ್ಪಲಿ ಎಸೆದ ಘಟನೆ ನಡೆದಿದೆ.
ಆದರೆ ಆತ ಎಸೆದ ಚಪ್ಪಲಿ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಸಭಿಕರ ಮೇಲೆ ಎರಗಿತೇ ವಿನಾ ನಿತೀಶ್ ಕುಮಾರ್ ಗೆ ತಾಗಲಿಲ್ಲ ಎಂದು ವರದಿಗಳು ತಿಳಿಸಿವೆ.
ಚಪ್ಪಲಿ ಎಸೆದ ತರುಣನನ್ನು ಚಂದನ್ ಎಂದು ಗುರುತಿಸಲಾಗಿದೆ. ಆತ ಈ ಕೃತ್ಯ ಎಸಗಿದೊಡನೆಯೇ ಆತನನ್ನು ಪಕ್ಷದ ಕಾರ್ಯಕರ್ತರು ಹಿಡಿದು ಎಳೆದಾಡಿ ಹಿಗ್ಗಾಮುಗ್ಗ ಹೊಡೆದರೆಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಚಂದನ್ ನನ್ನು ಪೊಲೀಸರು ಅಲ್ಲಿಂದ ಹೊರಗೆ ಒಯ್ದರು.
ಲೋಕ ನಾಯಕ ಜಯಪ್ರಕಾಶ ನಾರಾಯಣ್ ಅವರ ಜನ್ಮ ವರ್ಷಾಚರಣೆಯ ಪ್ರಯುಕ್ತ ನಗರದ ಬಾಪು ಸಭಾಗರ್ ಆಡಿಟೋರಿಯಂ ನಲ್ಲಿ ನಡೆಸಿದ್ದ ಛಾತ್ರ ಸಮಾಗಮ (ವಿದ್ಯಾರ್ಥಿ ಸಮಾವೇಶ) ಕಾರ್ಯಕ್ರಮದಲ್ಲಿ ಚಪ್ಪಲಿ ಎಸೆದ ಘಟನೆ ನಡೆಯಿತು. ವೇದಿಕೆಯಲ್ಲಿ ಸಿಎಂ ನಿತೀಶ್ ಅವರೊಂದಿಗೆ ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ ಸಿಂಗ್ ಮತ್ತು ಇತರ ಉನ್ನತ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.