ದೀಪಿಕಾಳ ರಾಜಕೀಯ ಸಂಬಂಧ ಯಾವ ಪಕ್ಷದ ಜತೆಗಿದೆ ಎಂಬುದು ಗೊತ್ತು: ಸ್ಮೃತಿ ಇರಾನಿ
ಯಾರು ದೇಶವನ್ನು ಒಡೆಯುವ ಜನರಿದ್ದಾರೋ ಅವರ ಜತೆ ಕೈಜೋಡಿಸಲು ಮುಂದಾಗಿದ್ದಾರೆ.
Team Udayavani, Jan 10, 2020, 3:53 PM IST
ನವದೆಹಲಿ: ಇತ್ತೀಚೆಗೆ ಜೆಎನ್ ಯು ವಿದ್ಯಾರ್ಥಿಗಳು ಮತ್ತು ಕೆಲ ವಿದ್ಯಾರ್ಥಿ ಸಂಘಟನೆಗಳು ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿರುವ ನಡುವೆ ದೀಪಿಕಾ ನಟನೆಯ ಛಪಾಕ್ ಸಿನಿಮಾ ನಿಷೇಧಿಸಿಬೇಕೆಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಏತನ್ಮಧ್ಯೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಡುಕೋಣೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೀಪಿಕಾ ಜೆಎನ್ ಯುನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಬಗ್ಗೆ ತಿರುಗೇಟು ನೀಡಿರುವ ಸ್ಮೃತಿ ಇರಾನಿ, ಯಾರಾದರೂ ಈ ಸುದ್ದಿಯನ್ನು(ಜೆಎನ್ ಯು ಭೇಟಿ) ಓದಿದರೆ ಅವರ ನಿಲುವು ಏನು ಎಂಬುದು ತಿಳಿಯುತ್ತದೆ. ಯಾರು ದೇಶವನ್ನು ಒಡೆಯುವ ಜನರಿದ್ದಾರೋ ಅವರ ಜತೆ ಕೈಜೋಡಿಸಲು ಮುಂದಾಗಿದ್ದಾರೆ. ಗಡಿಯಲ್ಲಿ, ದೇಶದಲ್ಲಿ ಸಿಆರ್ ಪಿಎಫ್ ಯೋಧರನ್ನು ಹತ್ಯೆಗೈದಾಗ ಪ್ರತಿ ಬಾರಿ ಸಂಭ್ರಮಿಸುವ ಜನರ ಪರವಾಗಿದ್ದೀರಿ ಎಂಬುದು ತಿಳಿದಿದೆ. ಯಾರು ಯುವತಿಯರ ಖಾಸಗಿ ಭಾಗಗಳಿಗೆ ಲಾಠಿಯಿಂದ ಹೊಡೆಯುತ್ತಾರೋ ಅಂತಹವರ ಬೆಂಬಲಕ್ಕೆ ನಿಂತಿದ್ದಾರೆ ಎಂಬುದಾಗಿ ವಾಗ್ದಾಳಿ ನಡೆಸಿದರು.
ಆಕೆಯ ಬೆಂಬಲ ಆಕೆಯ ಹಕ್ಕು. ನಾನು ಆಕೆಯ ಹಕ್ಕನ್ನು ನಿರಾಕರಿಸಲಾರೆ. ಈ ನಟಿಯ (ದೀಪಿಕಾ) ರಾಜಕೀಯ ಸಂಬಂಧ ಯಾರ ಜತೆಗಿದೆ ಎಂಬುದು 2011ರಲ್ಲಿ ತಿಳಿದಿತ್ತು. ಆಕೆ ಕಾಂಗ್ರೆಸ್ ಪಕ್ಷದ ಬೆಂಬಲಿಗಳಾಗಿದ್ದಾಳೆ. ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂಬ ಧ್ವನಿಗೆ ದೀಪಿಕಾ ಬೆಂಬಲ ಸೂಚಿಸಿದ್ದರು ಎಂದು ಸ್ಮೃತಿ ಇರಾನಿ ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಚೆನ್ನೈನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.