ಇದುವರೆಗೆ ಗದ್ದಲ; ಇನ್ನು 27ಕ್ಕೇ ಸಂಸತ್ ಕಲಾಪ
Team Udayavani, Dec 23, 2017, 8:27 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ವಿರುದ್ಧ ಮಾಡಿರುವ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೇಳಬೇಕು ಎಂದು ವಿಪಕ್ಷಗಳು ಪಟ್ಟು ಶುಕ್ರವಾರವೂ ಮುಂದುವರಿದಿದ್ದರಿಂದ, ಕಲಾಪವನ್ನು ಡಿ.27ರವರೆಗೆ ಮುಂದೂಡಲಾಗಿದೆ. ಸೋಮವಾರ ಹಾಗೂ ಮಂಗಳವಾರ ಕ್ರಿಸ್ಮಸ್ ಪ್ರಯುಕ್ತ ರಜೆ ನೀಡಲಾಗಿದೆ. ಇನ್ನು ಕೇವಲ ಏಳು ದಿನಗಳವರೆಗೆ ಕಲಾಪ ನಡೆಯಲಿದೆ. ಗದ್ದಲದಿಂದಾಗಿ ಹೆಚ್ಚಿನ ಮಸೂದೆಗಳು ಬಾಕಿ ಇವೆ.
ಲ್ಯಾಂಡ್ಲೈನ್ ಜತೆ ಜಾವಡೇಕರ್!: ಮೊಬೈಲ್ನ ರೇಡಿಯೇಶನ್ ತಪ್ಪಿಸಿ ಕೊಳ್ಳುವುದಕ್ಕಾಗಿ ಸದನಕ್ಕೆ ಲ್ಯಾಂಡ್ಲೈನ್ ಫೋನ್ ರಿಸೀವರ್ಅನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶುಕ್ರವಾರ ತಂದಿದ್ದರು. ಲ್ಯಾಂಡ್ಲೈನ್ ರಿಸೀವರನ್ನು ಮೊಬೈಲ್ಗೆ ಜೋಡಿಸಿ ಕೊಂಡು, ಫೋನ್ ಬಳಸುತ್ತಿದ್ದುದು ಗಮನ ಸೆಳೆಯಿತು.
ಹೆಚ್ಚು ವೇತನ ನೀಡಿ: ಸಂಸದರು ಹೆಚ್ಚಿನ ಅವಧಿಗೆ ಕೆಲಸ ಮಾಡುವುದ ರಿಂದ ಸಂಪುಟ ಕಾರ್ಯದರ್ಶಿಗಿಂತಲೂ ಹೆಚ್ಚಿನ ವೇತನವನ್ನು ನೀಡಬೇಕು. ಅಷ್ಟೇ ಅಲ್ಲ, ಸಂಬಳವನ್ನು ಏಳನೇ ವೇತನ ಆಯೋಗಕ್ಕೆ ಅನುಗುಣವಾಗಿರ ಬೇಕು ಎಂದು ರಾಜ್ಯಸಭೆ ಸದಸ್ಯ ನರೇಶ್ ಅಗರ್ವಾಲ್ ಹೇಳಿದರು. ಇವರ ಮಾತಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮ ದಾಸ್ ಅಠಾವಳೆ ಕೂಡ ಅನುಮೋದಿಸಿ ದರು. ಸದ್ಯ ಸಂಪುಟ ಕಾರ್ಯದರ್ಶಿಗೆ ಮಾಸಿಕ 2.50 ಲಕ್ಷ ರೂ. ವೇತನವಿದ್ದು, ಇದು ಪ್ರಧಾನಿ ಮತ್ತು ರಾಷ್ಟ್ರಪತಿ ಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಸಂಸದರಿಗೆ ಮಾಸಿಕ 50 ಸಾವಿರ ರೂ. ವೇತನ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Delhi: 9 ವರ್ಷಗಳಲ್ಲೇ ಡಿಸೆಂಬರ್ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!
Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್ಗೆ ನಟ ವಿಜಯ್ ಮನವಿ
ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ
Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.