ಪಾಕ್ ಗುಂಡಿನ ದಾಳಿಗೆ ಯೋಧ ಹುತಾತ್ಮ, 7 ವರ್ಷದ ಬಾಲಕಿ ಬಲಿ
Team Udayavani, Jul 17, 2017, 2:00 PM IST
ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಘಟನೆಯಲ್ಲಿ 7ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಸೋಮವಾರ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ರಜೌರಿ ಸೆಕ್ಟರ್ ಬಳಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಜಮ್ಮು ಕಾಶ್ಮೀರ ತ್ರಾಲ್ ಜಿಲ್ಲೆಯ ನಾಯಕ್ ಮುದ್ದಾಸರ್ ಅಹ್ಮದ್ ಹುತಾತ್ಮರಾಗಿರುವುದಾಗಿ ವರದಿ ತಿಳಿಸಿದೆ.
ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಪಡೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ಪಾಕ್ ಮಿಲಿಟರಿ ಕಮಾಂಡರ್ ಗೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ವರದಿ ಹೇಳಿದೆ.
ಪೂಂಜ್ ಪ್ರದೇಶವನ್ನು ಗುರಿಯಾಗಿರಿಸಿ ಪಾಕ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಬಾಲಕಿಯನ್ನು ಪೂಂಜ್ ಜಿಲ್ಲೆಯ ಬಾಲಕೋಟ್ ನ ಸೈದಾ ಎಂದು ಗುರುತಿಸಲಾಗಿದೆ ಎಂದು ಐಎಎನ್ ಎಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.