Indian Army; ಕಾಶ್ಮೀರದ ಕುಲ್ಗಾಮ್ ನಲ್ಲಿ ಸೈನಿಕ ನಾಪತ್ತೆ: ಕಾರಿನಲ್ಲಿ ರಕ್ತ ಪತ್ತೆ
Team Udayavani, Jul 30, 2023, 9:38 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರಜೆಯ ಮೇಲೆ ಮನೆಗೆ ಬಂದಿದ್ದ 25 ವರ್ಷದ ಯೋಧನನ್ನು ಆತನ ವಾಹನದಿಂದ ಅಪಹರಿಸಲಾಗಿದೆ ಎಂದು ಆತನ ಕುಟುಂಬ ಹೇಳಿಕೊಂಡಿದೆ.
ಜಾವೇದ್ ಅಹ್ಮದ್ ವಾನಿ ಎಂಬ ಭಾರತೀಯ ಸೇನಾ ಸಿಬ್ಬಂದಿಯನ್ನು ಲೇಹ್ (ಲಡಾಖ್) ನಲ್ಲಿ ನಿಯೋಜಿಸಲಾಗಿತ್ತು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಅಪಹರಣಕ್ಕೊಳಗಾದ ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಬೃಹತ್ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಜಾವೇದ್ ತನ್ನ ಕಾರನ್ನು ಚೋವಲ್ಗಾಮ್ ಗೆ ದಿನಸಿ ವಸ್ತುಗಳನ್ನು ಖರೀದಿಸಲು ಹೋಗಿದ್ದ.
ಇದನ್ನೂ ಓದಿ:ಕೈಕೊಟ್ಟ ಪ್ರಯೋಗ; ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಹೀನಾಯ ಸೋಲು
ಅವರು ಮನೆಗೆ ಬಾರದಿದ್ದಾಗ, ಅವರ ಕುಟುಂಬ ಸದಸ್ಯರು ಹತ್ತಿರದ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರನ್ನು ಹುಡುಕಲು ಪ್ರಾರಂಭಿಸಿದರು. ಶೋಧ ಕಾರ್ಯದ ವೇಳೆ ಪರಂಹಾಲ್ ಗ್ರಾಮದಲ್ಲಿ ಆತನ ಕಾರಿನಲ್ಲಿ ಚಪ್ಪಲಿ ಮತ್ತು ರಕ್ತದ ಕಲೆಗಳು ಪತ್ತೆಯಾಗಿವೆ. ವಾಹನವನ್ನು ಅನ್ಲಾಕ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.