ಸೈನಿಕರು, ಉಗ್ರರಿಂದಲೂ ಜನರ ಹತ್ಯೆ: ದಿಗ್ವಿಜಯ್
Team Udayavani, Apr 17, 2017, 10:22 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಯೋಧರಿಂದ ಅಥವಾ ಉಗ್ರರಿಂದ ಹತ್ಯೆಗೀಡಾಗುತ್ತಾರೆ. ಈ ಮೂಲಕ ಎರಡೂ ಕಡೆಗಳಿಂದ ನಾಗರಿಕರು ತೊಂದರೆಗೆ ಈಡಾಗುತ್ತಿದ್ದಾರೆ. ಅವರ ಕುಟುಂಬವರು ಕಣ್ಣು, ಕೈ ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ಜತೆಗೆ ಕಣಿವೆ ರಾಜ್ಯದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದ ಜನರಲ್ಲಿ ಅಭದ್ರತೆ ಕಾಡಲಾರಂಭಿಸಿದೆ ಎಂದು ಹೇಳಿದ್ದಾರೆ. 2005ರಿಂದ 2013-14ನೇ ಸಾಲಿನ ವರೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ ಇತ್ತು. ಈ ಸಾಧನೆ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಗೆ ಅಗೌರವ ತರುವ ಮಾತುಗಳನ್ನಾಡಿದ್ದಾರೆ. ಅವರು ಕ್ಷಮೆ ಕೋರಬೇಕೆಂದು ಒತ್ತಾಯಿ ಸಿದೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಕಾಂಗ್ರೆಸ್ ವರಿಷ್ಠ ಮಂಡಳಿ ವಿಚಾರದಿಂದ ದೂರ ಸರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.