ಮೀಸಲಿಗಾಗಿ ಮೋದಿಗೆ ಸೋನಿಯಾ ಪತ್ರ
Team Udayavani, Sep 22, 2017, 11:30 AM IST
ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಆದಷ್ಟು ಬೇಗ ಅಂಗೀಕಾರ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ್ದಾರೆ.
‘ಈ ಮಸೂದೆ, 2010ರ ಮಾ.9ರಂದೇ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಈಗ ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತವಿದೆ. ಮಹಿಳಾ ಮೀಸಲು ಮಸೂದೆ ಅಂಗೀಕಾರಕ್ಕೆ ಇದು ಉತ್ತಮ ಅವಕಾಶ. ಈ ನಿಟ್ಟಿನಲ್ಲಿ ದಯವಿಟ್ಟು ಪ್ರಯತ್ನಿಸಿ. ಆಡಳಿತಾರೂಢ ಪಕ್ಷ ಬಿಜೆಪಿಗೆ ಮಹಿಳಾ ಮಸೂದೆ ಬಗ್ಗೆ ಇರುವುದು ಕೇವಲ ತೋರಿಕೆಯ ಒಲವಲ್ಲ ಎಂಬುದನ್ನು ಸಾಬೀತುಪಡಿಸಿ’ ಎಂದು ಪತ್ರದಲ್ಲಿ ಹೇಳಿದ್ದಾರೆ. ಅಲ್ಲದೇ, ತಮ್ಮ ಪಕ್ಷ ಲೋಕಸಭೆಯಲ್ಲಿ ಇದನ್ನು ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದೂ ಹೇಳಿದ್ದಾರೆ. ಜೊತೆಗೆ ಪಂಚಾಯತ್ ಮತ್ತು ಪುರಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಅಂದಿನ ಪ್ರಧಾನಿ ರಾಜೀವ್ ಗಾಂಧಿ ಮೊದಲ ಬಾರಿಗೆ ನಿರ್ಧರಿಸಿದ ಕುರಿತೂ ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಈ ಪತ್ರ ಸೆ.20ರ ದಿನಾಂಕ ಹೊಂದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.