Congress; ರಾಜಸ್ಥಾನ ಇಲ್ಲವೇ ಹಿಮಾಚಲದಿಂದ ಸೋನಿಯಾ ರಾಜ್ಯಸಭಾ ಉಮೇದುವಾರಿಕೆ ಸಾಧ್ಯತೆ
ರಾಯ್ ಬರೇಲಿಯಿಂದ ಪ್ರಿಯಾಂಕಾ?
Team Udayavani, Feb 12, 2024, 8:01 PM IST
ಹೊಸದಿಲ್ಲಿ: ರಾಯ್ ಬರೇಲಿ ಲೋಕಸಭಾ ಸಂಸದೆಯಾಗಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ಇಲ್ಲವೇ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.
ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮುಕುಲ್ ವಾಸ್ನಿಕ್, ಅಜಯ್ ಮಾಕೇನ್ , ಕೆ.ಸಿ.ವೇಣುಗೋಪಾಲ್, ಸಲ್ಮಾನ್ ಖುರ್ಷಿದ್ ಸೇರಿ ಪ್ರಮುಖರು ಹಾಜರಿದ್ದರು.
ರಾಯ್ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ
ಸೋನಿಯಾ ಗಾಂಧಿ ಅವರು 2004 ರಿಂದ ಪ್ರತಿನಿಧಿಸುತ್ತಿರುವ ಉತ್ತರಪ್ರದೇಶದ ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಣಕ್ಕಿಳಿಯುವ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದ್ದು, ಅಭಿಷೇಕ್ ಮನು ಸಿಂಘ್ವಿ ಮತ್ತು ಅಜಯ್ ಮಾಕೆನ್ ಅವರು ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಫೆ 15 ಕೊನೆಯ ದಿನವಾಗಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಘಟಕ ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವಂತೆ 77 ರ ಹರೆಯದ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕಳೆದ ವಾರವೇ ಸೋನಿಯಾ ಗಾಂಧಿ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಖಮ್ಮಂ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. ಸೋನಿಯಾ ಗಾಂಧಿ ಅವರನ್ನು”ರಾಜ್ಯ ಸ್ಥಾನಮಾನ ನೀಡಿದ ತೆಲಂಗಾಣದ ಮಾತೆ” ಎಂದು ಜನರು ನೋಡುತ್ತಿದ್ದಾರೆ ಎಂದು ರೇವಂತ್ ರೆಡ್ಡಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.