ಒಳ್ಳೆಯ ಕೆಲಸ ಮಾಡಲು ರಾಜಕೀಯ ಬೇಕೆಂದಿಲ್ಲ, ಅರವಿಂದ್ ಜಿ ಜೊತೆನೂ ರಾಜಕೀಯ ಮಾತಾಡಿಲ್ಲ: ಸೋನು

ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ರಾಯಭಾರಿಯಾಗಲಿದ್ದಾರೆ ಸೋನು ಸೂದ್ : ಅರವಿಂದ ಕೇಜ್ರಿವಾಲ್

Team Udayavani, Aug 27, 2021, 11:32 AM IST

Sonu Sood meets Arvind Kejriwal, to become ambassador of Delhi govt’s ‘Desh ke Mentors’ programme

ನವ ದೆಹಲಿ : ನಟ ಸೋನು ಸೂದ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವನ್ನು ಇಂದು(ಶುಕ್ರವಾರ, ಆಗಸ್ಟ್ 27) ಭೇಟಿ ಮಾಡಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ನಟ ಸೋನು ಸೂದ್ ಇಬ್ಬರೂ ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ದೆಹಲಿ ಸರ್ಕಾರದ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ರಾಯಭಾರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ದೆಹಲಿ ಸರ್ಕಾರದಿಂದ ಅತೀ ಶೀಘ್ರದಲ್ಲಿ ಕಾರ್ಯ ರೂಪಕ್ಕೆ ಬರುವ ‘ದೇಶ್ ಕೆ ಮೆಂಟರ್ಸ್’ ಗೆ ಸೋನು ಜಿ ರಾಯಭಾರಿಯಾಗಿ ಸರ್ಕಾರದೊಂದಿಗೆ ಇರುವುದಕ್ಕೆ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಪ್ರೇಯಸಿಯನ್ನು ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ!

ಈ ಬಗ್ಗೆ ಪ್ರತಿಕ್ರಿಯಿಸಿದ ಸೋನು, ದೇಶದ ಭವಿಷ್ಯ ಎಂದೇ ಹೇಳಬಹುದಾದ ಸಹಸ್ರ ಸಹಸ್ರ ವಿದ್ಯಾರ್ಥಿಗಳ ಬಳಗಕ್ಕೆ ಈ ಕಾರ್ಯಕ್ರಮದ ಮೂಲಕ ದೆಹಲಿ ಸರ್ಕಾರ ಸಲಹೆ ಸೂಚನೆಗಳನ್ನು ನೀಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದಕ್ಕಿಂತ ದೊಡ್ಡ ಅವಕಾಶ ಇಲ್ಲ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಇನ್ನು, ದೇಶದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ  ನಾನು ಸಂಕಷ್ಟದಲ್ಲಿರುವ ಹಲವಾರು ವಲಸೆ ಕಾರ್ಮಿಕರನ್ನು ಸಂಪರ್ಕ ಮಾಡುವುದಕ್ಕೆ ಪ್ರಯತ್ನ ಪಟ್ಟೆ. ಆಗ ಅದೆಷ್ಟೋ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿರುವುದು ತಿಳಿಯಿತು. ಅದೆಷ್ಟೋ ವಲಸೆ ಕಾರ್ಮಿಕರ ಮಕ್ಕಳಲ್ಲಿ ಇದೊಂದು ದೊಡ್ಡ ಸಮಸ್ಯೆ. ಅಲ್ಪ ಪ್ರಮಾಣದಲ್ಲಿ ಆ ವರ್ಗದ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಅಷ್ಟೇ. ಆದರೇ, ಸರಿಯಾದ ಮಾರ್ಗದರ್ಶನ ಆ ಮಕ್ಕಳಿಗೆ ಇಲ್ಲ. ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ  ನೀಡುವ ಒಂದು ಉತ್ತಮ ಯೋಜನೆಯನ್ನು ಆರಂಭಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ನಾನು ಭಾಗಿದಾರನಾಗಿರಲಿದ್ದೇನೆ ಎನ್ನುವುದಕ್ಕೆ ಸಂತೋಷ ಇದೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುವಿರೇ..? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋನು, ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ನೀವು ರಾಜಕೀಯಕ್ಕೆ ಬರಬೇಕು ಎಂದು ಜನರು ಯಾವಾಗಲೂ ಹೇಳುತ್ತಾರೆ. ಆದರೇ, ಒಳ್ಳೆಯ ಕೆಲಸ ಮಾಡುವುದಕ್ಕೆ ರಾಜಕೀಯ ಬೇಕೆಂದಿಲ್ಲ. ನನಗೇ ಈಗಾಗಲೇ ರಾಜಕೀಯಕ್ಕೆ ಅನೇಕ ರಾಜಕೀಯ ಪಕ್ಷಗಳು ಆಹ್ವಾನಿಸಿದ್ದವು. ಆದರೇ, ನಾನು ಈವರೆಗೆ ಆ ಬಗ್ಗೆ ಯೋಚನೆ ಮಾಡಿಲ್ಲ. ಕೇಜ್ರಿವಾಲ್ ಜಿ ಅವರೊಂದಿಗೂ ನಾನು ಈವರೆಗೆ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿ : ಐಸಿಸ್ ಕೆ ದಾಳಿಗೆ ದೇಹಗಳು ಛಿದ್ರ, ಛಿದ್ರ…ಎಲ್ಲೇ ಅಡಗಿದ್ದರೂ ಉಗ್ರರನ್ನು ಬಿಡಲ್ಲ: ಬೈಡೆನ್

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.