ಮಾಸಾಂತ್ಯಕ್ಕೆ ಮೊದಲೇ ಕೇರಳಕ್ಕೆ ಮುಂಗಾರು?
Team Udayavani, May 25, 2017, 2:13 AM IST
ಹೊಸದಿಲ್ಲಿ: ಈ ಬಾರಿ ಮೇ 30ಕ್ಕೆ ಮೊದಲೇ ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಮೂಲಕ ರೈತರಿಗೆ ಸಂತಸದ ಸುದ್ದಿ ಕೊಟ್ಟಿದೆ. ಮಾನ್ಸೂನ್ ನಿಗದಿಗೂ ಮುಂಚೆ ಆಗಮಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರಾಜೀವನ್ ಅವರು ಹೇಳಿದ್ದಾರೆ. ಮೇ 30ರ ಮೊದಲೇ ಮುಂಗಾರು ಪ್ರವೇಶಿಸಿದಲ್ಲಿ, ಕರ್ನಾಟಕ ಕರಾಧಿವಳಿಗೆ ಮೂರು ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದೆ.
ಈ ಮೊದಲು ಹವಾಮಾನ ಇಲಾಖೆ ಮೇ 30ರಂದು ಮುಂಗಾರು ಆಗಮಿಸುವುದಾಗಿ ಹೇಳಿತ್ತು. ಆದರೆ ಇದೀಗ ಅದಕ್ಕೂ ಮೊದಲೇ ಬರುವ ನಿರೀಕ್ಷೆಗಳು ದಟ್ಟವಾಗಿದೆ ಎಂದು ಅವರು ಹೇಳಿದ್ದಾರೆ. ಸಾಮಾನ್ಯವಾಗಿ ಜೂ. 1ರಂದು ಮಾನ್ಸೂನ್ ಕೇರಳ ಕರಾವಳಿ ಪ್ರವೇಶಿಸುತ್ತದೆ. ಅಲ್ಲದೇ ಈ ಬಾರಿ ಎಲ್‌ನಿನೋ ಎಫೆಕ್ಟ್ ಕಡಿಮೆಯಾಗಿದ್ದು, ಮಳೆ ವಾಡಿಕೆಯಂತೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಬಾರಿ ಮುಂಗಾರು ಅವಧಿಯಲ್ಲಿ ಮೋಡ ಬಿತ್ತನೆಯ ಕಾರ್ಯಸಾಧ್ಯತೆ ಬಗ್ಗೆ ಸಚಿವಾಲಯ ಅಧ್ಯಯನ ಕೈಗೊಳ್ಳಲಿದೆ ಎಂದೂ ರಾಜೀವನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.