ಹಲವು ವಿಶೇಷತೆಗಳನ್ನು ಹೊಂದಿದೆ ಇಂದು ಉದ್ಘಾಟನೆಯಾಗಲಿರುವ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ
Team Udayavani, Nov 16, 2021, 12:13 PM IST
ಲಕ್ನೋ: ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ ಅಡಿಯಲ್ಲಿ 22,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾಗಿರುವ 340 ಕಿ,ಮೀ ಉದ್ದದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಯೋಜನೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಇಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಜೊತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಲಿದ್ದು, ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ರಾಜ್ಯದ ಪೂರ್ವ ಪ್ರದೇಶದ ಆರ್ಥಿಕತೆಯ ಬೆನ್ನೆಲುಬಾಗಲಿದೆ ಎಂದಿದ್ದಾರೆ. ಯುದ್ಧ ಮುಂತಾದ ತುರ್ತು ಸಂದರ್ಭದಲ್ಲಿ ರಸ್ತೆ ಮೇಲೆ ಯುದ್ದ ವಿಮಾನಗಳನ್ನು ಇಳಿಸಲು ಸಾಧ್ಯವಾಗುವಂತೆ ಯೋಜನೆ ರೂಪಿಸಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿಯಲಿದ್ದಾರೆ.
ಇದನ್ನೂ ಓದಿ:ಇನ್ನು ರಾತ್ರಿಯೂ ಪೋಸ್ಟ್‌ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು
ಈ ಎಕ್ಸ್‌ಪ್ರೆಸ್‌ವೇ ನ ಒಟ್ಟು ಉದ್ದ 340.824 ಕೀ.ಮಿ ಮತ್ತು ಆರು-ಪಥದ ಎಕ್ಸ್‌ಪ್ರೆಸ್ ವೇ ಆಗಿದ್ದು, ಈ ಹೆದ್ದಾರಿ ಮತ್ತೊಂದು ವಿಶೇಷ ಎಂದರೆ ಇದನ್ನು ಎಂಟು ಲೇನ್‌ಗಳಿಗೆ ಅಪ್‌ಗ್ರೇಡ್ ಮಾಡಬಹುದು.
ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರ ಪ್ರದೇಶದ ರಾಜಧಾನಿ ಲಕ್ನೋವನ್ನು ಅಜಂಗಢದ ಮೂಲಕ ಪೂರ್ವ ಪ್ರದೇಶಕ್ಕೆ ಸಂಪರ್ಕಿಸುತ್ತದೆ. ಈ ಎಕ್ಸ್‌ಪ್ರೆಸ್‌ವೇ ಅಭಿವೃದ್ಧಿಯೊಂದಿಗೆ, ರಾಜ್ಯದ ಪೂರ್ವ ಪ್ರದೇಶವು ಲಕ್ನೋಗೆ ಮಾತ್ರವಲ್ಲದೆ ಆಗ್ರಾ-ಲಕ್ನೋ ಮತ್ತು ಯಮುನಾ ಎಕ್ಸ್‌ಪ್ರೆಸ್‌ವೇಗಳ ಮೂಲಕ ರಾಷ್ಟ್ರೀಯ ರಾಜಧಾನಿ ದೆಹಲಿಗೆ ಸಂಪರ್ಕ ಕಲ್ಪಿಸುತ್ತದೆ.
ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ 22 ಫ್ಲೈಓವರ್‌ಗಳು, 7 ರೈಲ್ವೆ-ಓವರ್-ಬ್ರಿಡ್ಜ್‌ಗಳು, 7 ಪ್ರಮುಖ ಸೇತುವೆಗಳು, 114 ಸಣ್ಣ ಸೇತುವೆಗಳು, 6 ಟೋಲ್ ಪ್ಲಾಜಾಗಳು, 45 ವಾಹನ-ಅಂಡರ್‌ಪಾಸ್‌ಗಳು, 139 ಲೈಟ್ ವಾಹನ-ಅಂಡರ್‌ಪಾಸ್‌ಗಳು, 87 ಪಾದಚಾರಿ ಅಂಡರ್‌ಪಾಸ್ ಮತ್ತು 525 ಬಾಕ್ಸ್ ಕಲ್ವರ್ಟ್‌ಗಳನ್ನು ಹೊಂದಿರುತ್ತದೆ.
ಹೊಸ ಎಕ್ಸ್‌ಪ್ರೆಸ್‌ವೇ ಸಿಎನ್‌ಜಿ ಸ್ಟೇಷನ್‌ಗಳು, ವಾಹನಗಳಿಗೆ ಎಲೆಕ್ಟ್ರಿಕ್ ರೀಚಾರ್ಜ್ ಕೇಂದ್ರಗಳನ್ನು ಹೊಂದಿರುತ್ತದೆ. ಆಗ್ರಾ ಮತ್ತು ಬುಂದೇಲ್ ಖಂಡ್ ಎಕ್ಸ್‌ಪ್ರೆಸ್‌ವೇಗಳ ಮೂಲಕ ರಕ್ಷಣಾ ಕಾರಿಡಾರ್ ನೊಂದಿಗೆ ಸಂಪರ್ಕಗೊಳ್ಳುತ್ತದೆ. ಗಂಟೆಗೆ 120 ಕಿಮೀ ವೇಗದಲ್ಲಿ ವಾಹನಗಳ ಸಂಚಾರಕ್ಕಾಗಿ ಎಕ್ಸ್‌ಪ್ರೆಸ್‌ವೇಯನ್ನು ವಿನ್ಯಾಸಗೊಳಿಸಲಾಗಿದೆ. ಆದರೆ ವೇಗವನ್ನು ಗಂಟೆಗೆ 100 ಕಿಮೀ ಎಂದು ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.