ಡ್ರಿಂಕ್ & ಡ್ರೈವ್ ಗೆ 6 ತಿಂಗಳು ಜೈಲು,10ಸಾವಿರ ದಂಡ: ಈ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮ
Team Udayavani, Aug 2, 2022, 5:40 PM IST
ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ರಸ್ತೆ ಅಪಘಾತದಿಂದ ಸಾವುಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ 6 ತಿಂಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಲಾಗುವುದು. ಈ ನಿಯಮ ಆಗಸ್ಟ್ 2 ರಿಂದ (ಮಂಗಳವಾರ) ಆರಂಭಗೊಳ್ಳಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಗೋವಾದ ಜುವಾರಿ ಸೇತುವೆಯಲ್ಲಿ ವಾಹನವೊಂದು ನದಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಕಳೆದ ವಾರ ನಡೆದಿದೆ. ಅತಿ ವೇಗ ಹಾಗೂ ಕುಡಿದು ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವುದು ಸ್ಪಷ್ಟವಾಗಿದೆ. ಈ ಕುರಿತು ಟ್ರಾಫಿಕ್ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಇದೀಗ ಮದ್ಯಪಾನ ಮಾಡಿ ಅತಿವೇಗದಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಗೋವಾದ ಪೊಲೀಸ್ ಅಧೀಕ್ಷಕ ಧರ್ಮೇಶ ಆಂಗಲೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವಾಹನ ಅಪಘಾತಗಳನ್ನು ತಡೆಯಲು ಸಾರಿಗೆ ಇಲಾಖೆ ಇಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅವರ ಪಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ನನ್ನ ಹತ್ತಿರ ನಿಮ್ಮ ಆಟ ನಡೆಯುವುದಿಲ್ಲ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಚ್‌ಡಿಕೆ ಆಕ್ರೋಶ
ವಾಹನ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಅಪಘಾತದ ಸಾವುಗಳ ಸಾಮಾನ್ಯ ವಿಧವೆಂದರೆ ಕುಡಿದು ವಾಹನ ಚಾಲನೆ ಮತ್ತು ವೇಗದ ಚಾಲನೆ. ಈ ವರ್ಷ ಗೋವಾ ರಾಜ್ಯದಲ್ಲಿ ಇಂತಹ 133 ಪ್ರಕರಣಗಳು ನಡೆದಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ ಎಂದು ಧರ್ಮೇಶ ಆಂಗಲೆ ಮಾಹಿತಿ ನೀಡಿದರು.
ಅಪ್ರಾಪ್ತ ವಯಸ್ಸಿನ ಮಕ್ಕಳೂ ವಾಹನ ಚಲಾಯಿಸುತ್ತಿರುವುದು ಟ್ರಾಫಿಕ್ ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಯಾವುದೇ ಅಪ್ರಾಪ್ತ ಚಾಲಕರು ಕಂಡುಬಂದಲ್ಲಿ, ವಾಹನ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಅವರಿಂದ ದಂಡವನ್ನು ಸಂಗ್ರಹಿಸಲಾಗುವುದು. ಅಲ್ಲದೆ, ಮುಂದಿನ ಕ್ರಮಕ್ಕಾಗಿ ಈ ಪ್ರಕರಣವನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‍ಗೆ ಹಸ್ತಾಂತರಿಸಲಾಗುವುದು. ಕಳೆದ ವರ್ಷ 1519 ಅಪಘಾತ ನಡೆದಿದ್ದು, ಈ ಅಪಘಾತಗಳಲ್ಲಿ 143 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದಕ್ಷಿಣ ಗೋವಾ ಪೊಲೀಸ್ ಅಧೀಕ್ಷಕ ಧರ್ಮೇಶ ಆಂಗಲೆ ಆಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.