ಸ್ಪೈಸ್‌ಜೆಟ್ 2ನೇ ಅವಘಡ: ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ
Team Udayavani, Jul 5, 2022, 10:45 PM IST
ನವದೆಹಲಿ: ಸ್ಪೈಸ್‌ಜೆಟ್ ಏರ್‌ಲೈನ್‌ನಲ್ಲಿ ಮಂಗಳವಾರ ಎರಡೆರೆಡು ಸಮಸ್ಯೆಗಳು ಕಾಣಿಸಿಕೊಂಡಿದೆ.
ಗುಜರಾತ್‌ನ ಕಾಂಡ್ಲಾದಿಂದ ಮುಂಬೈಗೆ ಹೊರಟಿದ್ದ ವಿಮಾನವು, ಆಗಸದಲ್ಲಿದ್ದಾಗ ಇದ್ದಕ್ಕಿದ್ದಂತೆ ಅದರ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಬಿಟ್ಟಿದೆ.
ವಿಮಾನವು ಸುಮಾರು 23,000 ಅಡಿ ಎತ್ತರ ದಲ್ಲಿ ಹಾರಾಟ ನಡೆಸುತ್ತಿದ್ದಾಗ ಈ ಘಟನೆ ನಡೆ ದಿದೆ. ತಕ್ಷಣವೇ ವಿಮಾನದ ಸಿಬ್ಬಂದಿ ಎಚ್ಚೆತ್ತು ಕೊಂಡು, ಅಗತ್ಯ ಪರೀಕ್ಷೆಗಳನ್ನು ಮಾಡಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದೆ ಎಂದು ಸ್ಪೈಸ್‌ಜೆಟ್ ಸಂಸ್ಥೆ ತಿಳಿಸಿದೆ.
ಈ ಘಟನೆಗೂ ಮೊದಲು ನವದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್ ಜೆಟ್‌ನ ವಿಮಾನ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿದಿದೆ. ಇಂಧನ ಪೂರೈಕೆ ಮಾಡುವ ಟ್ಯಾಂಕ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಈ ಬೆಳವಣಿಗೆ ಉಂಟಾಗಿದೆ.
ವಿಮಾನದಲ್ಲಿದ್ದ 100 ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶ ನಾಲಯ(ಡಿಜಿಸಿಐ) ತನಿಖೆ ಕೈಗೆತ್ತುಕೊಂಡಿದೆ.
ಈ ಎರಡು ಪ್ರಕರಣಗಳು ಮೂಲಕ 17 ದಿನಗಳ ಅವಧಿಯಲ್ಲಿ ಸ್ಪೈಸ್ ಜೆಟ್‌ನ 7ನೇ ವಿಮಾನಕ್ಕೆ ತಾಂತ್ರಿಕ ತೊಂದರೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.