![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, May 9, 2022, 7:32 PM IST
ನವದೆಹಲಿ: ಸೋಮವಾರ ಬೆಳಗ್ಗೆ ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನಕ್ಕೆ ಹಕ್ಕಿ ಢಿಕ್ಕಿಯಾಗಿದ್ದು, ನಂತರ ರಾಷ್ಟ್ರ ರಾಜಧಾನಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಬೋಯಿಂಗ್ 737-8 MAX ವಿಮಾನವು ಸುಮಾರು 187 ಪ್ರಯಾಣಿಕರನ್ನು ಹೊತ್ತಿತ್ತು ಎಂದು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (IGIA) ಏರ್‌ಲೈನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲೇ ವಿಮಾನಕ್ಕೆ ಹಕ್ಕಿ ಢಿಕ್ಕಿಯಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿರ್ದಿಷ್ಟ ವಿವರಗಳು ತಕ್ಷಣವೇ ಲಭ್ಯವಿಲ್ಲ.
“ಮೇ 9 ರಂದು, ಬೆಳಗಾವಿ (ಕರ್ನಾಟಕ) ನಿಂದ ದೆಹಲಿಗೆ SG-8472 ಅನ್ನು ನಿರ್ವಹಿಸುತ್ತಿದ್ದ ಸ್ಪೈಸ್‌ಜೆಟ್ B737 ವಿಮಾನಕ್ಕೆ ಹಕ್ಕಿ ಅಪ್ಪಳಿಸಿತು. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಸ್ಪೈಸ್ ಜೆಟ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.