ವಿವಸ್ತ್ರಗೊಳಿಸಿ ತಪಾಸಣೆ ಗಗನಸಖೀಯರ ಆಕ್ರೋಶ
Team Udayavani, Apr 1, 2018, 7:00 AM IST
ಚೆನ್ನೈ: ಸ್ಪೈಸ್ ಜೆಟ್ ವೈಮಾನಿಕ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಗನಸಖೀಯರನ್ನು ತಪಾಸಣೆ ವೇಳೆ ವಿವಸ್ತ್ರಗೊಳಿಸಿದ್ದಲ್ಲದೆ, ಅತ್ಯಂತ ಕೆಟ್ಟದಾಗಿ ನಡೆಸಿಕೊಂಡ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಇಂಥ ವರ್ತನೆಯನ್ನು ಗಗನಸಖೀಯರು ಖಂಡಿಸಿ, ಪ್ರತಿಭಟನೆ ವ್ಯಕ್ತಪಡಿಸುತ್ತಿರುವ ವಿಡಿಯೋ ಕೂಡ ಬಹಿರಂಗವಾಗಿದ್ದು, ವೈರಲ್ ಆಗಿದೆ.
ಕಳೆದ ಕೆಲವು ದಿನಗಳಿಂದ ವಿಮಾನ ಇಳಿದು ಬರುತ್ತಿದ್ದಂತೆ, ನಮ್ಮದೇ ಸಂಸ್ಥೆಯ ಸಿಬಂದಿ ನಮ್ಮನ್ನು ವಿವಸ್ತ್ರಗೊಳಿಸಿ ತಪಾಸಣೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಋತುಸ್ರಾವ ಹಿನ್ನೆಲೆಯಲ್ಲಿ ನಾವು ಧರಿಸಿದ್ದ ಸ್ಯಾನಿಟರಿ ಪ್ಯಾಡ್ಗಳನ್ನೂ ತೆಗೆದು ತೋರಿಸುವಂತೆ ಸೂಚಿಸಿದ್ದಾರೆ. ಜತೆಗೆ, ಅಂಗಾಂಗಗಳನ್ನು ಕೆಟ್ಟದಾಗಿ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಗಗನಸಖೀಯರು ಆರೋಪಿಸಿದ್ದಾರೆ. ನಾವು ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ಮಾತನಾಡುತ್ತೇವೆ. ಈಗ ನಮ್ಮೊಂದಿಗೆ ನಡೆದಿದ್ದು ದೌರ್ಜನ್ಯವಲ್ಲವೇ ಎಂದೂ ಪ್ರಶ್ನಿಸಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ವಿಮಾನಯಾನ ಸಂಸ್ಥೆ, ನಗದು ರವಾನೆಯ ಅನುಮಾನದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ಕೈಗೊಂಡಿದ್ದರು. ಆದರೆ ಯಾರನ್ನೂ ವಿವಸ್ತ್ರಗೊಳಿಸಿಲ್ಲ ಎಂದಿದೆ. ಜತೆಗೆ, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.