ಯೋಗಿ ರಾಜ್ಯದಲ್ಲಿ ಕಲಬೆರಕೆ ಮದ್ಯ ಸೇವಿಸಿ 12 ಸಾವು
Team Udayavani, Feb 8, 2019, 8:15 AM IST
ಲಕ್ನೋ: ಉತ್ತರಪ್ರದೇಶದ ಶರಣಪುರ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ಕಲಬೆರಕೆ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ಶುಕ್ರವಾರಕ್ಕೆ 12ಕ್ಕೇರಿದೆ. ಮೌನಿ ಅಮವ್ಯಾಸೆ ಪ್ರಯುಕ್ತ ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ಈ ಕಲಬೆರಕೆ ಮದ್ಯವನ್ನು ಸೇವಿಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯ ಕುರಿತಾದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದು ಅಸ್ವಸ್ಥರಿಗೆ ತಕ್ಷಣವೇ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಸೂಚಿಸಿದ್ದಾರೆ ಮತ್ತು ಸಂತ್ರಸ್ತರ ರಕ್ತ ಸಂಬಂಧಿಗಳಿಗೆ ತಲಾ 2 ಲಕ್ಷ ರೂಪಾಯಿಗಳು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರುವವರ ರಕ್ತ ಸಂಬಂಧಿಗಳಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.
ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಯೋಗಿ ಅವರು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಬಕಾರಿ ಇನ್ ಸ್ಪೆಕ್ಟರ್ ಗಳನ್ನು, ಇಬ್ಬರು ಹೆಡ್ ಕಾನ್ ಸ್ಟೇಬಲ್ ಗಳನ್ನು ಹಾಗೂ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.