19 ಭಾಷೆಗಳಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ ಬಿಡುಗಡೆ
Team Udayavani, Feb 17, 2020, 3:06 AM IST
ವಾರಾಣಸಿ: ವಾರಾಣಸಿಯಲ್ಲಿರುವ ಜಂಗಮ ವಾಡಿ ಮಠದ ಜಗದ್ಗುರು ವಿಶ್ವಾರಾಧ್ಯ ಗುರುಕುಲ ಶತಮಾನೋತ್ಸವ ಆಚರಿಸಿಕೊಳ್ಳುತ್ತಿ ರುವುದು, 21ನೇ ಶತಮಾನದ ಹೊಸ ದಶಕದಲ್ಲಿ ಜಗತ್ತಿಗೆ ಭಾರತದ ಮಹತ್ವ ಸಾರುವ ನಿಟ್ಟಿನಲ್ಲಿ ಪ್ರಮುಖವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಭಾನುವಾರ ಜಂಗಮವಾಡಿ ಮಠದ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿ ಸಿದ ಪ್ರಧಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿಯವರು ಹತ್ತೂಂಭತ್ತು ಭಾಷೆಗಳಲ್ಲಿ ಮುದ್ರಣಗೊಂಡಿ ರುವ ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥವನ್ನೂ ಬಿಡುಗಡೆ ಮಾಡಿದರು.
ಮೊಬೈಲ್ ಆ್ಯಪ್ ಮೂಲಕವೂ ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಓದಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದಾಗಿ ವಿಶೇಷವಾಗಿ ಯುವ ಸಮುದಾಯದವರಿಗೆ ಹೆಚ್ಚು ಸ್ಫೂರ್ತಿಯಾಗಲಿದೆ ಎಂಬ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ವಾರ್ಷಿಕವಾಗಿ ಗ್ರಂಥದಲ್ಲಿ ಉಲ್ಲೇಖಗೊಂಡಿರುವ ವಿಚಾರಗಳನ್ನು ಆಧರಿಸಿ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲು ಸಲಹೆ ನೀಡಿದ್ದಾರೆ.
“ಪ್ರಜೆಯಾಗಿ ನಾವು ನಡೆದುಕೊಳ್ಳುವ ರೀತಿ ದೇಶದ ಭವಿಷ್ಯತ್ತನ್ನು ಮತ್ತು ಹೊಸ ದಿಕ್ಕನ್ನು ನಿರ್ಧರಿಸಲಿದೆ’ ಎಂದು ಹೇಳಿದ್ದಾರೆ. ಸಂತರು ಹಾಕಿಕೊಟ್ಟ ಮಾರ್ಗವನ್ನು ನಾವು ಅನುಸರಿಸಬೇಕು. ಈ ಮೂಲಕ ದೇಶ ನಿರ್ಮಾಣ ಕಾರ್ಯದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು ಎಂದಿದ್ದಾರೆ. ಸ್ವತ್ಛ ಭಾರತದ ಬಗ್ಗೆ ಪ್ರಸ್ತಾಪಿಸಿದ ಅವರು ಶುಚಿತ್ವದ ಬಗ್ಗೆ ಜನರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು.
ಇದರ ಜತೆಗೆ ಭಾರತದಲ್ಲಿಯೇ ಉತ್ಪಾದಿಸಲಾಗುವ ವಸ್ತುಗಳನ್ನೇ ಬಳಕೆ ಮಾಡುವಂತೆ ಅವರು ಮನವಿ ಮಾಡಿಕೊಂಡರು. ನೀರು ಉಳಿಸಲು ವಿಶೇಷವಾಗಿ ಆಯೋಜನೆ ಮಾಡಲಾಗಿರುವ “ಜಲ ಜೀವನ್ ಮಿಷನ್’ನಲ್ಲಿ ಎಲ್ಲರೂ ಭಾಗವಹಿಸಿ ಅದನ್ನು ಯಶಸ್ಸುಗೊಳಿಸುವಂತೆಯೂ ಕರೆ ನೀಡಿದರು. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.
ಕನ್ನಡದಲ್ಲಿ ಮಾತನಾಡಿದ ಪ್ರಧಾನಿ: ಕಾರ್ಯಕ್ರಮದಲ್ಲಿ ಪ್ರಧಾನಿಯವರು ಕನ್ನಡದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅಲ್ಲಿ ಸೇರಿದ್ದವರೆಲ್ಲ ಕರತಾಡನ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದರ ಜತೆಗೆ ತೆಲುಗು, ಮರಾಠಿಗಳಲ್ಲಿಯೂ ಕೂಡ ಅವರು ಕೊಂಚ ಹೊತ್ತು ಮಾತನಾಡಿದರು. ವೀರಶೈವ ಸಂಪ್ರದಾಯ ಜನರನ್ನು ಪರಸ್ಪರ ಗೌರವಿಸುವಂತೆ ಮಾಡಿದೆ ಎಂದರು. ದೇಶ ಕೇವಲ ಆಡಳಿತದಿಂದ ಸಾಗದು. ಅದಕ್ಕೆ ಜತೆಯಾಗಿ ಸಂಸ್ಕೃತಿಯೂ ಬೇಕು. ಯುವಜನತೆಗೆ ಭಕ್ತಿಯ ಪಥದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು. ಜಂಗಮವಾಡಿ ಮಠ ವಾರಾಣಸಿಯಲ್ಲಿರುವ ಅತ್ಯಂತ ಹಳೆಯ ಮಠವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.