ಶ್ರೀನಗರ : ಉಗ್ರರ ಗ್ರೆನೇಡ್ ದಾಳಿ ಇಬ್ಬರು ಸೈನಿಕರು ಸೇರಿದಂತೆ, ನಾಲ್ವರು ನಾಗರಿಕರಿಗೆ ಗಾಯ
Team Udayavani, Feb 2, 2020, 3:20 PM IST
ಶ್ರೀನಗರ : ಉಗ್ರರ ಗ್ರೆನೇಡ್ ದಾಳಿಯಿಂದ ಇಬ್ಬರು ಭದ್ರತಾ ಪಡೆಯ ಸಿಬ್ಬಂದಿಗಳು ಸೇರಿದಂತೆ,ನಾಲ್ವರು ನಾಗರಿಕರು ಗಾಯಗೊಂಡ ಘಟನೆ ಶ್ರೀನಗರದ ಲಾಲ್ ಚೌಕ್ ಪ್ರದೇಶದಲ್ಲಿ ರವಿವಾರ ನಡೆದಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು ನಗರದ ಪ್ರತಾಪ್ ಪಾರ್ಕ್ ಪ್ರದೇಶದ ಬಳಿ ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ ಎಂದು ಹೇಳಿದ್ದಾರೆ. ಸಿಆರ್ಪಿಎಫ್ ಪಡೆಯ ವಕ್ತಾರ ಪಂಕಜ್ ಸಿಂಗ್, ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ರೆನೇಡ್ ದಾಳಿ ನಾಗರಿಕರಲ್ಲಿ ಭೀತಿ ಉಂಟುಮಾಡಿದೆ.ಅದರಲ್ಲೂ ಭಾನುವಾರದ ಮಾರುಕಟ್ಟೆಯಲ್ಲಿ ಈ ದಾಳಿ ಭಯವನ್ನು ಸೃಷ್ಟಿಸಿದ್ದು ಭದ್ರತಾ ಪಡೆ ಕಟ್ಟೆಚ್ಚರ ವಹಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.