ಐತಿಹಾಸಿಕ ಕ್ಷಣ:ಇಸ್ರೋ 100 ನೇ ಉಪಗ್ರಹ ಉಡಾವಣೆ ಯಶಸ್ವಿ
Team Udayavani, Jan 12, 2018, 10:24 AM IST
ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ 100 ನೇ ಉಪಗ್ರಹವನ್ನು ಇತರ 30 ಉಪಗ್ರಹಗಳೊಂದಿಗೆ ಯಶಸ್ವಿಯಾಗಿ ಉಡಾವಣೆ ಮಾಡಿ ಐತಿಹಾಸಿಕ ದಾಖಲೆ ನಿರ್ಮಿಸಿದೆ.
ಪೊಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಸಿ40 (ಪಿಎಸ್‌ಎಲ್‌ವಿ ಸಿ40) ಉಡಾವಣಾ ವಾಹಕದ ಮೂಲಕ ಉಡಾಯಿಸಲಾದ ಒಟ್ಟು 31 ಉಪಗ್ರಹಗಳು ಕಕ್ಷೆ ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ.
2017, ಆಗಸ್ಟ್ 31ರಂದು ಪಿಎಸ್‌ಎಲ್‌ವಿ ರಾಕೆಟ್ ಮೂಲಕ ನಡೆಸಲಾಗಿದ್ದ ಉಡಾವಣೆ ವಿಫಲಗೊಂಡಿತ್ತು. ಆ ಬಳಿಕ ಇದೀಗ ಮತ್ತೆ ಪಿಎಸ್‌ಎಲ್‌ವಿ ಸರಣಿ ರಾಕೆಟ್‌ನಲ್ಲಿಯೇ ಉಡಾವಣೆಗೆ ಮುಂದಾಗಿದ್ದರಿಂದ ಇದು ಸಾಕಷ್ಟು ಮಹತ್ವ ಪಡೆದುಕೊಂಡಿತ್ತು.
ಕಕ್ಷೆ ಸೇರಿರುವ ಉಪಗ್ರಹ ಕಾರ್ಟೊಸ್ಯಾಟ್ 2ಎಸ್: ಕಾರ್ಟೊಸ್ಯಾಟ್ 2ಎಸ್ ಇದೀಗ ಉಡಾವಣೆಯಾದ ಉಪಗ್ರಹ. ಈ ಸರಣಿಯಲ್ಲಿ ಉಡಾವಣೆ ಆಗುತ್ತಿರುವ 7ನೇ ಉಪಗ್ರಹ ಇದಾಗಿದೆ.
ಪ್ರಯೋಜನ ಏನೇನು?
ಇದೀಗ ಬಾಹ್ಯಾಕಾಶ ಸೇರಿಕೊಂಡಿರುವ ಉಪಗ್ರಹಗಳು ಭಾರತದ ವಿವಿಧ ಕ್ಷೇತ್ರಗಳ ಸಂವಹನಕ್ಕೆ ಆನೆ ಬಲ ನೀಡಲಿದೆ. ಹೆಚ್ಚೆಚ್ಚು ಗುಣಮಟ್ಟದ ಫೋಟೋಗಳನ್ನು ರವಾನಿಸಲು, ಶರವೇಗದ ಮಾಹಿತಿಗಳ ವಿನಿಮಯಕ್ಕೆ ಸಹಕಾರಿಯಾಗಲಿದೆ. ಕಾಟೋìಗ್ರಾಫಿಕ್ಸ್ ಅಪ್ಲಿಕೇಷನ್ಸ್, ಅರ್ಬನ್ ಮತ್ತು ರೂರಲ್ ಅಪ್ಲಿಕೇಷನ್ಸ್, ಕರಾವಳಿ ಭೂ ಬಳಕೆ ಹಾಗೂ ನಿಯಂತ್ರಣ, ರಸ್ತೆ ಸಂಪರ್ಕ ನಿಯಂತ್ರಣ, ನೀರು ಬಳಕೆ ಸೇರಿದಂತೆ ಇವುಗಳ ಕುರಿತಾದ ಅಧ್ಯಯನಕ್ಕೆ ಸಹಕಾರಿಯಾಗುವಂತೆ ಇವು ಕಾರ್ಯನಿರ್ವಹಿಸಲಿವೆ. ಕಾರ್ಟೊಸ್ಯಾಟ್2, 2ಎ ಮತ್ತು 2ಬಿ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.