BJP ಸೇರ್ಪಡೆಯಾಗಲು ಕಾಲ್ತುಳಿತದಂತ ಸನ್ನಿವೇಶ ನಿರ್ಮಾಣವಾಗಿದೆ: ಯುಪಿ ಡಿಸಿಎಂ
80ಕ್ಕೆ 80 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ...
Team Udayavani, Feb 21, 2024, 5:39 PM IST
ಲಕ್ನೋ : ಉತ್ತರಪ್ರದೇಶದಲ್ಲಿ ಬಿಜೆಪಿ ಸೇರ್ಪಡೆಯಾಗಲು ವಿಪಕ್ಷಗಳ ಕಾರ್ಯಕರ್ತರು ಭಾರೀ ಉತ್ಸಾಹ ತೋರುತ್ತಿದ್ದು, ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಬುಧವಾರ ಯುಪಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಹೇಳಿಕೆ ನೀಡಿದ್ದಾರೆ.
ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಬಿಜೆಪಿಯ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಭೂಪೇಂದ್ರ ಚೌಧರಿ ಅವರೊಂದಿಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮೌರ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗಗಳಿಗೆ ಜಾರಿಗೆ ತಂದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿ ವಿಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿದ್ದಾರೆ. ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್‌ನ ಹಲವು ನಾಯಕರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದರು.
“ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಳ್ಳುವುದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ಕಂಡುಬರುತ್ತಿದೆ” ಎಂದರು.
ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮೌರ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.