ಗಂಡು ಮಕ್ಕಳಿಗೂ ಜವಾಬ್ದಾರಿ ಕಲಿಸಿ
Team Udayavani, Apr 25, 2018, 7:00 AM IST
ಮಾಂಡ್ಲಾ (ಮ.ಪ್ರ): 12 ವರ್ಷದೊಳಗಿನವರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದನ್ನು ಪ್ರಧಾನಿ ಮೋದಿ ಸಮರ್ಥಿಸಿಕೊಂಡಿದ್ದಾರೆ. ಅತ್ಯಾಚಾರದಂಥ ಹೀನ ಕೃತ್ಯಗಳ ವಿರುದ್ಧ ಕೇಂದ್ರ ಸರಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂಬುದು ಈ ಕ್ರಮದಿಂದ ಸಾಬೀತಾಗಿದೆ ಎಂದಿದ್ದಾರೆ. ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯ ರಾಮನಗರದಲ್ಲಿ ‘ರಾಷ್ಟ್ರೀಯ ಪಂಚಾಯತ್ ದಿನಾಚರಣೆ’ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮಾತನಾಡಿದರು.
ಹೆತ್ತವರು ಪುತ್ರಿಯರನ್ನು ಯಾವ ರೀತಿ ಗೌರವಿಸುತ್ತಾರೋ ಅದೇ ರೀತಿ ಪುತ್ರರನ್ನು ಹೆಚ್ಚು ಹೊಣೆಗಾರಿಕೆಯುಳ್ಳವರನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಜಾರಿಗೊಳಿಸಿರುವುದು ಸರಕಾರದ ಬದ್ಧತೆಯನ್ನು ತೋರಿಸಿದೆ ಎಂದರು. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ತಾವು ಸುರಕ್ಷಿತ ಎಂಬ ಭಾವನೆ ಮೂಡಿಸಬೇಕು. ಅದಕ್ಕಾಗಿ ಹೆಣ್ಣು ಮಕ್ಕಳನ್ನು ಹೆತ್ತವರು ಗೌರವಿಸಬೇಕು, ಪುತ್ರರನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿಸುವ ಬಗ್ಗೆ ಕುಟುಂಬದಲ್ಲಿ ಆದ್ಯತೆ ಸಿಗಬೇಕು ಎಂದಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಬುಡಕಟ್ಟು ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನವನ್ನು ಪ್ರಧಾನಿ ಉದ್ಘಾಟಿಸಿದ್ದಾರೆ. ಇದಲ್ಲದೆ ಗ್ರಾ.ಪಂ.ಗಳಲ್ಲಿ ಇ-ಪಂಚಾಯತ್ ವ್ಯವಸ್ಥೆ ಜಾರಿಗೊಳಿಸಿದ ಹಲವು ಪಂಚಾಯತ್‌ಗಳನ್ನು ಇದೇ ಸಂದರ್ಭ ದಲ್ಲಿ ಗೌರವಿಸಲಾಯಿತು. ಇಂದ್ರಧನುಷ್ ಯೋಜನೆಯಡಿ ಶೇ.100ರಷ್ಟು ಲಸಿಕೆ ಹಾಕಿಸಿಕೊಂಡ, ಸೌಭಾಗ್ಯ ಯೋಜನೆ ಅಡಿಯಲ್ಲಿ ಎಲ್‌ಪಿಜಿ ಸಂಪರ್ಕ ಸಾಧಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಹೊಗೆರಹಿತ ಅಡುಗೆ ಮನೆಗಳನ್ನು ಹೊಂದಿದ ಗ್ರಾ.ಪಂ.ಗಳನ್ನೂ ಗೌರವಿಸಲಾಯಿತು. ಇದೇ ವೇಳೆ, ಉದ್ಯೋಗ ಖಾತ್ರಿ ಯೋಜನೆಗೆ ನೀಡಲಾದ ಮೊತ್ತವನ್ನು ಬೇಸಗೆಯ 3 ತಿಂಗಳ ಕಾಲ ಜಲ ಸಂರಕ್ಷಣೆಗಾಗಿ ಬಳಸುವಂತೆ ಪಂಚಾಯತ್‌ಗಳಿಗೆ ಮೋದಿ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.