ಉತ್ತರಪ್ರದೇಶ ಲಖಿಂಪುರ್ ಪ್ರಕರಣ; ಸರ್ಕಾರಿ ಪ್ರಾಯೋಜಿತ ಹಿಂಸಾಚಾರ: ಅಸಾದುದ್ದೀನ್ ಒವೈಸಿ
ಲಖಿಂಪುರ್ ಘಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.
Team Udayavani, Oct 5, 2021, 3:32 PM IST
ಹೈದರಾಬಾದ್: ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದಿರುವುದು ಉತ್ತರಪ್ರದೇಶ ಸರ್ಕಾರಿ ಪ್ರಾಯೋಜಿತ ಹಿಂಸಾಚಾರವಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಕೇಂದ್ರ ಮತ್ತು ಉತ್ತರಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ವಾಡಿ ಐಟಿಐ ಕಾಲೇಜಿಗೆ ಬೀಗ: ಬೀದಿಗೆ ಬಿದ್ದ ನೂರಾರು ವಿದ್ಯಾರ್ಥಿಗಳ ಬದುಕು
ಉತ್ತರಪ್ರದೇಶದ ಲಖಿಂಪುರ್ ನಲ್ಲಿ ನಡೆದ ಘಟನೆಯಲ್ಲಿ ರೈತರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಅಸಾದುದ್ದೀನ್ ಒವೈಸಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಎಎನ್ ಐ ಜತೆ ಮಾತನಾಡಿದ ಒವೈಸಿ, ಇದೊಂದು ರಾಜ್ಯ ಸರ್ಕಾರ ಪ್ರಾಯೋಜಿತ ಹಿಂಸಾಚಾರವಾಗಿದೆ. ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವರ ಪ್ರಚೋದನಕಾರಿ ಭಾಷಣ ಮಾಡಿದ್ದು, ಲಖಿಂಪುರ್ ಘಟನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.
ಲಖಿಂಪುರ್ ಹಿಂಸಾಚಾರ ಪ್ರಕರಣದ ಬಗ್ಗೆ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಮುಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸುವುದಾಗಿ ರೈತ ಸಂಘಟನೆಗಳು ತಿಳಿಸಿವೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ವೇಗವಾಗಿ ಕಾರು ಚಲಾಯಿಸಿ, ರೈತರ ಮೇಲೆ ಹತ್ತಿಸಿದ ಪರಿಣಾಮ ನಾಲ್ವರು ರೈತರು ಸಾವನ್ನಪ್ಪಲು ಕಾರಣವಾಗಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.