ಸಾಲ ಮನ್ನಾಗೆ ಕೇಂದ್ರದ ನೆೆರವಿಲ್ಲ: ಜೇಟ್ಲಿ ಸ್ಪಷ್ಟನೆ
Team Udayavani, Jun 13, 2017, 2:23 AM IST
ಹೊಸದಿಲ್ಲಿ: ಸಾಲ ಮನ್ನಾ ವಿಚಾರದಲ್ಲಿ ರಾಜ್ಯ ಸರಕಾರಗಳ ಜತೆ ನಿಲ್ಲಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲ ಮನ್ನಾ ಮಾಡಲಾಗಿದ್ದು, ಉಳಿದ ರಾಜ್ಯಗಳಲ್ಲೂ ಇದೇ ಬೇಡಿಕೆಯನ್ನಿರಿಸಿಕೊಂಡು ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ಕರ್ನಾಟಕ ಸೇರಿದಂತೆ ಕೆಲ ರಾಜ್ಯ ಸರಕಾರಗಳು ಕೇಂದ್ರ ಅರ್ಧ ಸಾಲ ಮನ್ನಾ ಮಾಡಿದರೆ, ಉಳಿದರ್ಧ ನಾವು ಮಾಡುತ್ತೇವೆ ಎಂದು ಹೇಳುತ್ತಿವೆ. ಇದಕ್ಕೆ ಸ್ಪಷ್ಟವಾಗಿ ಉತ್ತರಿಸಿರುವ ಅರುಣ್ ಜೇಟ್ಲಿ ಅವರು, ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರಕಾರದ ಮಧ್ಯ ಪ್ರವೇಶ ಇಲ್ಲವೇ ಇಲ್ಲ ಎಂದಿದ್ದಾರೆ. ಅಲ್ಲದೆ ಸಾಲ ಮನ್ನಾ ಮಾಡಲು ರಾಜ್ಯ ಸರಕಾರಗಳೇ ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಡೀಕರಿಸಿಕೊಳ್ಳಬೇಕು. ಇದಕ್ಕಾಗಿ ಕೇಂದ್ರ ಸರಕಾರದ ಬಾಗಿಲು ಬಡಿಯುವಂತಿಲ್ಲ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಬಂದ ಕೂಡಲೇ ಮೊದಲಿಗೆ ಮಾಡಿದ ಕೆಲಸ ಸಾಲ ಮನ್ನಾ. ಇದಾದ ಬಳಿಕ ಇತರ ರಾಜ್ಯಗಳಲ್ಲೂ ರೈತರ ಸಾಲ ಮನ್ನಾಗೆ ಬಹುವಾಗಿ ಬೇಡಿಕೆ ಬಂತು. ಮಹಾರಾಷ್ಟ್ರದಲ್ಲಿ ಭಾರೀ ಪ್ರತಿಭಟನೆಯೇ ಆಗಿ, ಹಿಂಸಾಚಾರಕ್ಕೂ ಕಾರಣವಾಯಿತು. ಕಡೆಗೆ ರೈತರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸರಕಾರ ಸಾಲ ಮನ್ನಾ ಮಾಡಿದೆ. ಮಹಾರಾಷ್ಟ್ರದ ಹೋರಾಟದ ಅನಂತರ, ಮಧ್ಯಪ್ರದೇಶದಲ್ಲೂ ಸಾಲ ಮನ್ನಾ ಸಹಿತ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆಗಳೇ ನಡೆದಿವೆ. ಅಲ್ಲದೆ ಹೋರಾಟದ ವೇಳೆ ಪೊಲೀಸರು ಹಾರಿಸಿದ ಗುಂಡಿಗೆ ಐವರು ರೈತರೂ ಬಲಿಯಾಗಿದ್ದಾರೆ. ಸದ್ಯಕ್ಕೆ ಅಲ್ಲಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಉಪವಾಸ ಸತ್ಯಾಗ್ರಹ ಮಾಡಿ, ರೈತರ ಹೋರಾಟವನ್ನು ಸ್ವಲ್ಪ ಮಟ್ಟಿಗೆ ತಣ್ಣಗೆ ಮಾಡಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.
ಇನ್ನು ಕರ್ನಾಟಕದಲ್ಲೂ ಸಾಲ ಮನ್ನಾಕ್ಕೆ ಸಂಬಂಧಿಸಿದಂತಹ ಭಾರೀ ಚರ್ಚೆಗಳಾಗುತ್ತಿವೆ. ಪ್ರಸ್ತುತ ಅಧಿವೇಶನ ನಡೆಯುತ್ತಿದ್ದು, ಬಿಜೆಪಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದೆ. ಕೆಲವು ಬಿಜೆಪಿ ಸರಕಾರವಿರುವ ರಾಜ್ಯಗಳಲ್ಲಿ ಆಗಲೇ ಸಾಲ ಮನ್ನಾ ಮಾಡಲಾಗಿದ್ದು, ಇಲ್ಲಿಯೂ ಮಾಡಲಿ ಎಂದು ಅದು ಒತ್ತಾಯಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ, ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ದೃಷ್ಟಿಯಿಂದ ಉತ್ತಮವಲ್ಲ ಎಂದು ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ಇತ್ತೀಚೆಗಷ್ಟೇ ಹೇಳಿದ್ದರು. ಇದರಿಂದ ಇಡೀ ಆರ್ಥಿಕತೆ ಕುಸಿತ ಕಾಣುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.