ರಾಷ್ಟ್ರಪತಿ ಭವನದಲ್ಲಿ ಸಾವು
Team Udayavani, Jun 9, 2018, 6:00 AM IST
ಹೊಸದಿಲ್ಲಿ: ರಾಷ್ಟ್ರಪತಿ ಭವನದ ಸಿಬ್ಬಂದಿ ವಸತಿಗೃಹದಲ್ಲಿ ಗುರುವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಅದು ರಾಷ್ಟ್ರಪತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿ 5 ದಿನಗಳ ಹಿಂದೆಯೇ ತಮ್ಮ ಕೊಠಡಿಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಈ ವಿಷಯ ಯಾರಿಗೂ ಗೊತ್ತಾಗಿರಲಿಲ್ಲ. ಗುರುವಾರ ಕೆಟ್ಟ ವಾಸನೆ ಬರುತ್ತಿದೆ ಎಂದು ನಿವಾಸಿಗಳು ದೂರಿದ್ದು, ಪರಿಶೀಲಿಸಿದಾಗ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಠಡಿಗೆ ಒಳಗಿನಿಂದಲೇ ಚಿಲಕ ಹಾಕಲಾಗಿತ್ತು. ವ್ಯಕ್ತಿಯು ಹೃದಯಾಘಾತದಿಂದ ನಿಧನರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.