ರಾಮನವಮಿ ಧ್ವಜಕ್ಕೆ ಮಾಂಸ ಕಟ್ಟಿ ಅಪವಿತ್ರ: ಎರಡು ಗುಂಪುಗಳ ನಡುವೆ ಘರ್ಷಣೆ; Sec 144 ಜಾರಿ
Team Udayavani, Apr 10, 2023, 10:18 AM IST
ಜೆಮ್ಶೆಡ್ಪುರ (ಜಾರ್ಖಂಡ್): ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿ ನಡೆದಿರುವುದು ವರದಿಯಾಗಿದೆ.
ಶನಿವಾರ ರಾತ್ರಿಯಿಂದಲೇ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು ನೋಡಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ, ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಘರ್ಷಣೆ ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳು ಬ್ಯಾಟ್ ಹಿಡಿದು ಬಂದು, ಇಟ್ಟಿಗೆ ಎಸೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಎರಡು ಅಂಗಡಿ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದಾರೆ.
ಇದನ್ನೂ ಓದಿ: Pregnant Woman: ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಗರ್ಭಿಣಿ ಮಹಿಳೆ ಮೃತ್ಯು; ಇಬ್ಬರ ಬಂಧನ
ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು, ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಶಾಸ್ತ್ರಿನಗರ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.